Publish Date: Sun, 18 Feb 2018 (17:48 IST)
Updated Date: Sun, 18 Feb 2018 (17:50 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬ್ಯಾಂಕಿನಲ್ಲಿ ಹಣ ಇಡಿ ಅಂತಾರೆ. ಹಣ ಹೂಡಿಕೆ ಮಾಡಿದ್ರೆ ನೀರವ್ ಮೋದಿ ಅಂಥವರು ಲೂಟಿ ಮಾಡ್ತಾರೆ. ಆದರೆ, ಮೋದಿ ಅವರು ಇದರ ಬಗ್ಗೆ ಬಾಯಿ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಭಾನುವಾರ ಏರ್ಪಡಿಸಿದ್ದ ಮಸ್ಕಿ ತಾಲ್ಲೂಕು ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೂ ಮುನ್ನು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀರವ್ ಮೋದಿಯ ಬಗ್ಗೆ ನರೇಂದ್ರ ಮೋದಿ ಅವರು ಮಾತನಾಡಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಾಗ ಮೋದಿ ಮೌನವಹಿಸುತ್ತಾರೆ. ಅವರು ನಮ್ಮಂತೆ ಜನರ ಕೈಗೆ ಸಿಗುತ್ತಾರಾ ಎಂದು ಪ್ರಶ್ನಿಸಿದ ಅವರು ಮಾಧ್ಯಮದವರನ್ನು ಸಹ ಹತ್ತಿರ ಬಿಟ್ಟುಕೊಳ್ಳುವುದಿಲ್ಲ ಎಂದಿದ್ದಾರೆ.
ಇದೇ ವೇಳೆ ಜೆಡಿಎಸ್ ಹಾಗೂ ಬಿಎಸ್ ಪಿ ಮೈತ್ರಿಯ ಬಗ್ಗೆ ಪ್ರತಿಕ್ರಿಯಿಸಿ ಯಾವುದೇ ಪರಿಣಾಮ ಆಗುವುದಿಲ್ಲ. ಎರಡೂ ಪಕ್ಷಗಳಿಗೆ ಅಷ್ಟೊಂದು ಸಾಮರ್ಥ್ಯವಿಲ್ಲ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.