Daily Horoscope
✕

ನೀರವ್ ಮೋದಿಯ ಬಗ್ಗೆ ನರೇಂದ್ರ ಮೋದಿ ಮಾತನಾಡಬೇಕು– ಸಿದ್ದರಾಮಯ್ಯ

Webdunia
ಭಾನುವಾರ, 18 ಫೆಬ್ರವರಿ 2018 (17:48 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬ್ಯಾಂಕಿನಲ್ಲಿ ಹಣ ಇಡಿ ಅಂತಾರೆ. ಹಣ ಹೂಡಿಕೆ ಮಾಡಿದ್ರೆ ನೀರವ್  ಮೋದಿ  ಅಂಥವರು ಲೂಟಿ ಮಾಡ್ತಾರೆ. ಆದರೆ, ಮೋದಿ ಅವರು ಇದರ ಬಗ್ಗೆ ಬಾಯಿ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
 
ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಭಾನುವಾರ ಏರ್ಪಡಿಸಿದ್ದ  ಮಸ್ಕಿ ತಾಲ್ಲೂಕು ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೂ ಮುನ್ನು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀರವ್ ಮೋದಿಯ ಬಗ್ಗೆ ನರೇಂದ‌್ರ ಮೋದಿ ಅವರು ಮಾತನಾಡಬೇಕು ಎಂದು ಆಗ್ರಹಿಸಿದ್ದಾರೆ.
 
ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಾಗ ಮೋದಿ ಮೌನವಹಿಸುತ್ತಾರೆ. ಅವರು ನಮ್ಮಂತೆ ಜನರ ಕೈಗೆ ಸಿಗುತ್ತಾರಾ ಎಂದು ಪ್ರಶ್ನಿಸಿದ ಅವರು ಮಾಧ್ಯಮದವರನ್ನು ಸಹ ಹತ್ತಿರ ಬಿಟ್ಟುಕೊಳ್ಳುವುದಿಲ್ಲ ಎಂದಿದ್ದಾರೆ.
 
ಇದೇ ವೇಳೆ ಜೆಡಿಎಸ್ ಹಾಗೂ ಬಿಎಸ್ ಪಿ ಮೈತ್ರಿಯ ಬಗ್ಗೆ ಪ್ರತಿಕ್ರಿಯಿಸಿ ಯಾವುದೇ ಪರಿಣಾಮ ಆಗುವುದಿಲ್ಲ. ಎರಡೂ ಪಕ್ಷಗಳಿಗೆ ಅಷ್ಟೊಂದು ಸಾಮರ್ಥ್ಯವಿಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಂತಹ ದುರಂತ ನಾಯಕನ ಸಹಸವಾಸ ಮಾಡಿ ಖರ್ಗೆಯವರೂ ಹೀಗಾದ್ರು: ಛಲವಾದಿ ನಾರಾಯಣಸ್ವಾಮಿ

ಅಪ್ಪ, ಮಗ ಇಬ್ರೂ ಸರಿಯಿಲ್ಲ, ಖರ್ಗೆ ಬಾಯಿ ಫಿನಾಯಿಲ್ ಹಾಕಿ ತೊಳೆಯಬೇಕು: ಆರ್ ಅಶೋಕ್ ವಾಗ್ದಾಳಿ

ಹೋಟೆಲ್ ಕಾರಿಡಾರ್ ನಲ್ಲಿ ದೊಪ್ಪನೆ ಬಿದ್ದ ನವವಧು, ಎತ್ತಿ ಹೋದ ಪತಿ: 5 ಸೆಕೆಂಡ್ನ ಶಾಕಿಂಗ್ ಸಿಸಿಟಿವಿ ದೃಶ್ಯ ವೈರಲ್ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ವೈದ್ಯನಂತೆ ನಟಿಸಿ ಚುಚ್ಚುಮದ್ದು ನೀಡಲು ಮುಂದಾದ ವ್ಯಕ್ತಿ: ತಕ್ಷಣವೇ ಓಡಿಹೋದ ನಕಲಿ ವಿಕಲಚೇತನ ಭಿಕ್ಷುಕ Video

ಮುಂದಿನ ಸುದ್ದಿ
Show comments