Publish Date: Mon, 19 Feb 2018 (11:40 IST)
Updated Date: Mon, 19 Feb 2018 (11:41 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಯೋಜನೆಗಾಗಿ ಶೇ 50 ರಷ್ಟು ಖರ್ಚನ್ನು ಹಾಗೂ ಭೂಮಿಯನ್ನು ನೀಡಿದ್ದೇವೆ. ಆದ್ದರಿಂದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದಿದ್ದಾರೆ.
ಶ್ರವಣಬೆಳಗೊಳದ ಬಾಹುಬಲಿಯ ಮಹಾ ಮಸ್ತಕಾಭಿಷೇಕದಲ್ಲಿ ಪಾಲ್ಗೊಂಡಗ ನಂತರ ಮೈಸೂರಿಗೆ ಬರುವ ನರೇಂದ್ರ ಮೋದಿ ಅವರು ರೈಲ್ವೆ ನಿಲ್ದಾಣದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.