Select Your Language

Notifications

webdunia
webdunia
webdunia
webdunia

ಇಂದು ರಾಷ್ಟ್ರೀಯ ಹೆದ್ದಾರಿ ಬಂದ್; ಎಲ್ಲೆಲ್ಲಿ ಬಂದ್ ಆಗಲಿದೆ ಗೊತ್ತಾ?

ಬೆಂಗಳೂರು
ಬೆಂಗಳೂರು , ಸೋಮವಾರ, 10 ಜೂನ್ 2019 (10:13 IST)
ಬೆಂಗಳೂರು : ರಾಜ್ಯ ಸರ್ಕಾರದ ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಹಾಗೂ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ರೈತರು ಇಂದು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.




ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು, ಬೊಮ್ಮಸಂದ್ರದ ಸಮೀಪದ ರಾಷ್ಟ್ರೀಯ ಹೆದ್ದಾರಿ, ದೇವನಹಳ್ಳಿ ಟೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ, ಚಿಕ್ಕಬಳ್ಳಾಪುರ, ಕೋಲಾರ ಭಾಗದ ರಾಷ್ಟ್ರೀಯ ಹೆದ್ದಾರಿ, ಮೈಸೂರು, ಮಂಡ್ಯ, ರಾಮನಗರ ಭಾಗದ ರಾಷ್ಟ್ರೀಯ ಹೆದ್ದಾರಿ, ಬಳ್ಳಾರಿ, ಹಾವೇರಿ, ಬೆಳಗಾವಿ ಭಾಗದ ರಾಷ್ಟ್ರೀಯ ಹೆದ್ದಾರಿ, ದಾವಣಗೆರೆ, ಸುತ್ತಮುತ್ತ ಇರುವ ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗುವ ಸಾಧ್ಯತೆಯಿದೆ.


ಈಗಾಗಲೇ ಚಿಕ್ಕಬಳ್ಳಾಪುರ ತಾಲೂಕಿನ ಚದಲಪುರ ಬೈಪಾಸ್ ನ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದು ಬೆಂಗಳೂರು- ಹೈದರಾಬಾದ್ ಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಾದ ಹಿನ್ನಲೆಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಪಾಕಿಸ್ತಾನದಲ್ಲಿ ಹಿಂದೂ ಅಪ್ರಾಪ್ತ ಬಾಲಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು