Select Your Language

Notifications

webdunia
webdunia
webdunia
webdunia

ಭಾರೀ ಮಳೆಗೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಬಂದ್

ಹೆದ್ದಾರಿ
ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮುಖ್ಯರಸ್ತೆಗಳೇ ಬಂದ್ ಆಗಿವೆ.

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿವೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಆಗಿದೆ.
ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿಯೂ ವಾಹನಗಳ ಸಂಚಾರ ಸ್ಥಗಿತಗೊಂಡಿದೆ.  

ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಗಳಲ್ಲಿ ಭಾರೀ ಪ್ರಮಾಣದ ನೀರು ತುಂಬಿಕೊಂಡಿದೆ.

ಬಾಗಲಕೋಟ - ಮಹಾರಾಷ್ಟ್ರ ಸಂಪರ್ಕಿಸುವ ರಾಯಭಾಗ ತಾಲೂಕಿನ ಕುಡಚಿ ರಾಜ್ಯ ಹೆದ್ದಾರಿ ವಾಹನ ಸವಾರರಿಗೆ ಕಾಣುತ್ತಲೇ ಇಲ್ಲ. ಭಾರೀ ನೀರಿನಲ್ಲಿ ರಸ್ತೆಯೇ ಕಾಣದಾಗಿದೆ.

ಅಥಣಿ ತಾಲೂಕಿನ ದರೂರ ಸೇತುವೆ ಮುಳುಗಡೆಯಾಗಿದೆ. ಚಿಕ್ಕೋಡಿ ತಾಲೂಕಿನ ಮಾಂಜರಿ ಸೇರಿದಂತೆ ಹಲವೆಡೆ ರಸ್ತೆಗಳ ಮೇಲೆ ಹರಿಯುತ್ತಿರುವ ನೀರು ವಾಹನಗಳ ಸವಾರರ ಸಂಕಷ್ಟಕ್ಕೆ ಕಾರಣವಾಗಿದೆ.  



Share this Story:

Follow Webdunia kannada

ಮುಂದಿನ ಸುದ್ದಿ

ಶಾಲೆಯಲ್ಲೇ ನೇಣು ಬಿಗಿದುಕೊಂಡ ಹೆಡ್ ಮಾಸ್ಟರ್