Publish Date: Tue, 25 Jan 2022 (14:55 IST)
Updated Date: Tue, 25 Jan 2022 (19:00 IST)
ವಿಧಾನಸೌಧದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರತಿಜ್ಞಾ ಬೋಧನೆ ಕಾರ್ಯಕ್ರಮ ನಡೆಯಿತು. ಸಿಎಂ ಬಸವ ರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಚಿವ ವಿ. ಸೋಮಣ್ಣ ಭಾಗಿಯಾಗಿ ಪ್ರತಿಜ್ಞಾವಿಧಿ ಭೋದಿಸಿದರು.
ಸಮಾಜಕ್ಕಾಗಿ ನಿರ್ಧಾರ ತೆಗೆದುಕೊಳ್ಳುವ ಇಂದಿನ ಕಾಲಘಟ್ಟದಲ್ಲಿ 18 ರಿಂದ 19 ವರ್ಷದ ಯುವ ಸಮಾಜಕ್ಕೆ ಚುನಾವಣೆ ಮಹತ್ವ ತಿಳಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು. ಇನ್ನು ಈ ನಿಟ್ಟಿನಲ್ಲಿ ಮುಂಬ ರುವ ದಿನಗಳಲ್ಲಿ ಎಲ್ಲಾ ಚುನಾವಣೆಯಲ್ಲಿ ನಿಮ್ಮ ಜವಾಬ್ದಾರಿ ಅರಿತು ಮತದಾನ ಮಾಡಿ ಎಂದು ಹೇಳಿದರು.