Publish Date: Fri, 10 Jun 2022 (19:23 IST)
Updated Date: Fri, 10 Jun 2022 (19:28 IST)
ಪ್ರವಾದಿ ಮೊಹಮದ್ ಪೈಗಂಬರ್ ಬಗ್ಗೆ ಬಿಜೆಪಿ ಉಚ್ಛಾಟಿತ ನಾಯಕಿ ನೂಪುರ್ ಶರ್ಮ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ದಿಢೀರನೆ ನಡೆದ ಪ್ರತಿಭಟನೆ ಹಿಂಸಾರೂಪ ಪಡೆದಿದ್ದು, ಪೊಲೀಸರು ಲಾಠಿ ಪ್ರಹಾರ ಹಾಗೂ ಅಶ್ರುವಾಯು ಪ್ರಯೋಗಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ದೇಶದ ಹಲವು ರಾಜ್ಯಗಳಲ್ಲಿ ಕೂಡ ಪ್ರತಿಭಟನೆ ಆರಂಭಗೊಂಡಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರದ ಸೂಚನೆ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ.
ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದ್ದು, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆ ಹೆಚ್ಚಿಸುವಂತೆ ಸೂಚಿಸಲಾಗಿದೆ.