ಪ್ರಾಕೃತಿಕ ವಿಕೋಪ ನಿರ್ವಹಣೆ: ಬೆಂಗಳೂರಿಗೆ 4 ಎಸ್‌ಡಿಆರ್‌ಎಫ್ ತಂಡ ರಚನೆ

Webdunia
ಗುರುವಾರ, 18 ನವೆಂಬರ್ 2021 (21:37 IST)
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಅನಿರೀಕ್ಷಿತ ಮಳೆ ಮುಂದುವರಿದಿದೆ. ಇದರ ಪರಿಣಾಮ ಬೆಂಗಳೂರು ನಗರದಲ್ಲಿ ಹೆಚ್ಚಾಗಿ ಆಗುತ್ತಿದೆ. ಆದ್ದರಿಂದ ಬೆಂಗಳೂರು ಕೇಂದ್ರಿತವಾಗಿ ನಾಲ್ಕು ಎಸ್‌ಡಿಆರ್‌ಎಫ್ ತಂಡಗಳ ರಚನೆಗೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಗ್ಗು ಪ್ರದೇಶದಲ್ಲಿ ಮಳೆಯ ಅವಾಂತರವನ್ನು ತಡೆಯಲು ಮತ್ತು ಪರಿಹಾರಕ್ಕಾಗಿ ತಂಡಗಳನ್ನು ಹೆಚ್ಚಿಸಲು ಸೂಚನೆ ನೀಡಲಾಗಿದೆ. ಎನ್‌ಡಿಆರ್‌ಎಫ್ ತಂಡಗಳನ್ನು ಬಳಸಿಕೊಳ್ಳುವುದಕ್ಕೆ ಸೂಚಿಸಲಾಗಿದೆ ಎಂದು ಹೇಳಿದರು.
ಅಧಿಕಾರಿಗಳ ಸಭೆ ನಡೆಸಿ ಮಳೆನಿಂತ ತಕ್ಷಣ ಬೆಂಗಳೂರಿನ ರಸ್ತೆಗಳ ಸಮಗ್ರ ರಿಪೇರಿಗೆ ಸೂಚಿಸಲಾಗಿದೆ. ರಸ್ತೆಗಳ ನಿರ್ವಹಣಾ ಗುತ್ತಿಗೆದಾರರು ರಿಪೇರಿ ಮಾಡದೇ ಇದ್ದರೆ, ಗುತ್ತಿಗೆದಾರರ ಪಾವತಿಯನ್ನು ತಡೆಹಿಡಿದು ಬಿಬಿಎಂಪಿಯೇ ರಿಪೇರಿ ಮಾಡಲು ನಿರ್ದೇಶನ ನೀಡಲಾಗಿದೆ. ಅಲ್ಲದೇ 110 ಹಳ್ಳಿಗಳಲ್ಲಿ ಒಳಚರಂಡಿ ಜಾಲಕ್ಕೆ ತೊಂದರೆಯಾಗಿದೆ. ಇದಕ್ಕೆ 280 ಕೋಟಿ ರೂ. ಬಿಡುಗಡೆ ಮಾಡಿ, ಕಾಮಗಾರಿ ನಡೆಸಲು ಅನುಮತಿಸಲಾಗಿದೆ ಎಂದು ವಿವರಿಸಿದರು.
ಅನಿರೀಕ್ಷಿತ ಮಳೆಯಿಂದಾಗಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಕೃಷಿ ಇಲಾಖೆಯಿಂದ ಬೆಳೆ ಹಾನಿ ಸಮೀಕ್ಷೆಯನ್ನೂ ಮಾಡಲಾಗುತ್ತಿದೆ. ತೋಟಗಾರಿಕಾ ಇಲಾಖೆಯು ಹಣ್ಣು ಹಂಪಲು, ತರಕಾರಿಗಳ ನಷ್ಟದ ಕುರಿತು ನಿಗಾ ವಹಿಸುತ್ತದೆ. ನಷ್ಟ ಪರಿಹಾರ ವಿತರಣೆಗೆ ಕ್ರಮಕೈಗೊಳ್ಳುತ್ತೇವೆ. ಬೆಳೆಗಳ ಕನಿಷ್ಠ ಬೆಂಬಲಬೆಲೆ ಖರೀದಿ ಸಂಬಂಧ ಇಂದು ಮಹತ್ವದ ಸಭೆಯೊಂದನ್ನು ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

ಮುಂದಿನ ಸುದ್ದಿ
Show comments