Select Your Language

Notifications

webdunia
webdunia
webdunia
webdunia

ಜಗದೀಶ್ ಶೆಟ್ಟರ್ ಆರೋಪಕ್ಕೆ ನಾವ್ ತಲೆಕೆಡಿಸಿಕೊಳ್ಳಲ್ಲ : ಬೊಮ್ಮಾಯಿ

ಜಗದೀಶ್ ಶೆಟ್ಟರ್ ಆರೋಪಕ್ಕೆ ನಾವ್ ತಲೆಕೆಡಿಸಿಕೊಳ್ಳಲ್ಲ : ಬೊಮ್ಮಾಯಿ
ಬಾಗಲಕೋಟೆ , ಬುಧವಾರ, 19 ಏಪ್ರಿಲ್ 2023 (11:57 IST)
ಬಾಗಲಕೋಟೆ : ನನ್ನ ಟಿಕೆಟ್ ಕೈತಪ್ಪಲು ಬಿಎಲ್ ಸಂತೋಷ್ ಕಾರಣ. ನನ್ನ ಈ ಸ್ಥಿತಿಗೆ ಅವರೇ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದರು. ಶೆಟ್ಟರ್ನ ಈ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ, ನಾವು ಅವರ ಆರೋಪಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸೂಕ್ಷ್ಮವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
 
ಸಚಿವ ಗೋವಿಂದ ಕಾರಜೋಳ ನಾಮಪತ್ರ ಸಲ್ಲಿಕೆ ಹಾಗೂ ರೋಡ್ ಶೋದಲ್ಲಿ ಭಾಗವಹಿಸಲು ಮುಧೋಳ ನಗರಕ್ಕೆ ಆಗಮಿಸಿದ ಬೊಮ್ಮಾಯಿ ಮಾಧ್ಯಮಗಳ ಜೊತೆ ಮಾತನಾಡುತ್ತ, ಜಗದೀಶ್ ಶೆಟ್ಟರ್ ಹೇಳಿಕೆ ಸರಿಯಲ್ಲ. ನಾವು ರಾಜ್ಯಮಟ್ಟದಿಂದ ಅವರ ಹೆಸರನ್ನು ಕಳುಹಿಸಿದ್ದೆವು.

ಮೇಲ್ಮಟ್ಟದಲ್ಲಿ ಒಂದು ನೀತಿಯ ಮೇಲೆ ಟಿಕೆಟ್ ಫೈನಲ್ ಮಾಡಿದ್ದಾರೆ. ಈಗಾಗಲೇ ಆ ಬಗ್ಗೆ ಸಾಕಷ್ಟು ಬಾರಿ ಹೇಳಿದ್ದೇನೆ. ಅವರ ಆರೋಪದ ಬಗ್ಗೆ ನಾವೇನು ತಲೆಕೆಡಿಸಿಕೊಳ್ಳುವುದಿಲ್ಲ. ಉತ್ತರ ಕರ್ನಾಟಕದಲ್ಲಿ ಹೆಚ್ಚು ಸೀಟ್ ಗೆಲ್ಲಲು ರೂಪುರೇಷೆಗಳನ್ನು ಮಾಡಿದೆ. ಹೆಚ್ಚು ಸೀಟ್ ಗೆದ್ದೇಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಣ್ಣಾಮಲೈ ವಿರುದ್ಧವೂ ಕಿಡಿಕಾರಿದ ಜಗದೀಶ್ ಶೆಟ್ಟರ್?