Select Your Language

Notifications

webdunia
webdunia
webdunia
webdunia

ನವಲಿ ಸಮಾನಾಂತರ ಜಲಾಶಯ : ಸಚಿವ ಸಂಪುಟ ಗ್ರೀನ್ ಸಿಗ್ನಲ್

ನವಲಿ ಸಮಾನಾಂತರ ಜಲಾಶಯ : ಸಚಿವ ಸಂಪುಟ ಗ್ರೀನ್ ಸಿಗ್ನಲ್
ಕೊಪ್ಪಳ , ಭಾನುವಾರ, 17 ಮೇ 2020 (18:59 IST)
ಬಹು ನಿರೀಕ್ಷಿತ, ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯದ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ರಾಜ್ಯ ಸರ್ಕಾರ ಹೊಸ ಯೋಜನೆ ರೂಪಿಸಿದೆ.

ತುಂಗಭದ್ರಾ ಜಲಾಶಯದಲ್ಲಿ ಬಹಳಷ್ಟು ಹೂಳು ತುಂಬಿರುವ ಕಾರಣ ಉಂಟಾಗಿದ್ದ ನೀರು ಸಂಗ್ರಹಣೆಯ ಸಾಮರ್ಥ್ಯ ಸಮಸ್ಯೆಯನ್ನು ನೀಗಿಸಲು ಪರ್ಯಾಯ ಜಲಾಶಯ ನಿರ್ಮಾಣ ಕುರಿತು ವಿಸ್ತೃತ ಯೋಜನಾ ವರದಿ ತಯಾರಿಸಲು ಸಚಿವ ಸಂಪುಟ ಸಭೆ ಅನುಮತಿ ನೀಡಿದೆ.

ಪ್ರಸ್ತುತ ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯ 130 TMC ಇದ್ದರೂ 31.616 TMC ಯಷ್ಟು ನೀರು ಹೂಳು ತುಂಬಿರುವ ಕಾರಣದಿಂದ ಕನಿಷ್ಠ 30 TMC ನೀರು ವ್ಯರ್ಥವಾಗುತ್ತಿತ್ತು.

ಈ ನೀರನ್ನು ಹಿಡಿದಿಟ್ಟು ಸಮರ್ಪಕವಾಗಿ ಬಳಕೆ ಮಾಡಲು ಮುಂದಾಗಿರುವ ಜಲಸಂಪನ್ಮೂಲ ಇಲಾಖೆ, ಹೊಸದಾಗಿ ಸಮತೋಲನ ಜಲಾಶಯ ನಿರ್ಮಾಣ ಮಾಡುವ ನೂತನ ಯೋಜನೆ ರೂಪಿಸಿದೆ.

ಅದರಂತೆ ನವಲಿ ಗ್ರಾಮದ ಹತ್ತಿರ ಹೊಸದಾಗಿ ಸಮತೋಲನ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತಕ್ಕೆ ಕರ್ನಾಟಕ ರಾಜ್ಯದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಈ ಸಮತೋಲನ ಜಲಾಶಯ ನಿರ್ಮಾಣಕ್ಕಾಗಿ ವಿಸ್ತೃತ ಯೋಜನಾ ವರದಿ ತಯಾರಿಸಲು 14.30 ಕೋಟಿ ರೂಪಾಯಿ ಮೊತ್ತದ ಅನುದಾನ ಬಿಡುಗಡೆ ಮಾಡಲು ಜಲಸಂಪನ್ಮೂಲ ಇಲಾಖೆ ಆದೇಶಿಸಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ತಬ್ಲಿಘಿ ಸಂಪರ್ಕ ಹೊಂದಿದ್ದ ವ್ಯಕ್ತಿ ಸಾವು