Publish Date: Tue, 08 Mar 2022 (13:09 IST)
Updated Date: Tue, 08 Mar 2022 (13:11 IST)
ಬೆಂಗಳೂರು : ನವೀನ್ ಮೃತದೇಹ ಸಿಕ್ಕಿದೆ. ಉಕ್ರೇನಿನ ಶವಾಗಾರದಲ್ಲಿ ನವೀನ್ನ ಮೃತ ದೇಹ ಇಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನವೀನ್ ಮೃತ ದೇಹವನ್ನು ತರುವ ಬಗ್ಗೆ ಕೇಂದ್ರ ಸಚಿವ ಜೈಶಂಕರ್ ಅವರ ಜತೆ ಮಾತಾಡಿದ್ದೇನೆ. ರಾಯಭಾರಿ ಕಚೇರಿ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇವೆ. ಮೃತದೇಹ ತರುವ ಬಗ್ಗೆ ಮಾತುಕತೆ ನಡೆಸುತ್ತೇವೆ ಎಂದು ಹೇಳಿದರು.
ರಷ್ಯಾ ಉಕ್ರೇನ್ ಮೇಲೆ ಇನ್ನೂ ದಾಳಿ ನಡೆಸುತ್ತಿದೆ. ಜೊತೆಗೆ ಉಕ್ರೇನ್ನಲ್ಲಿ ಶೆಲ್ ದಾಳಿ ಇನ್ನೂ ನಡೀತಿದೆ. ಅದು ನಿಂತ ಮೇಲೆ ಮೃತ ದೇಹ ತರುವ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.