ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ ಅವರ ಸಮ್ಮುಖದಲ್ಲಿ ಆರು ನಕ್ಸಲರು ಮುಖ್ಯವಾಹಿನಿಗೆ ಬಂದ ಬೆನ್ನಲ್ಲೇ ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದ್ದಾರೆ.
ಕೊಪ್ಪ ತಾಲ್ಲೂಕಿನ ಜಯಪುರ ವ್ಯಾಪ್ತಿಯ ಕಿತ್ತಲೆಗುಳಿ ಬಳಿಯ ಅರಣ್ಯದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡು ದೊರೆತಿವೆ. ಒಂದು ಎ.ಕೆ-56, ಮೂರು 303 ರೈಫಲ್, ಹನ್ನೆರಡು ಬೋರ್ ಎಸ್‌ಬಿಬಿಎಲ್, ಒಂದು ಸ್ವದೇಶ ನಿರ್ಮಿತ ಬಂದೂಕು ಸಿಕ್ಕಿದೆ.
ಅರಣ್ಯದಲ್ಲಿ 7.62 ಎಂಎಂ ಎ.ಕೆ. ಮದ್ದುಗುಂಡು-11, 303- ರೈಫಲ್ ಮದ್ದುಗುಂಡು 133, 12 ಬೋರ್ ಕಾರ್ಟ್ರಿಡ್ಜಸ್ – 24, ಸ್ವದೇಶ ನಿರ್ಮಿತ ಪಿಸ್ತೂಲ್ ಮದ್ದುಗುಂಡುಗಳು 8 ಸೇರಿ ಒಟ್ಟು 176 ಮದ್ದುಗುಂಡು, ಎ.ಕೆ-56 ಖಾಲಿ ಮ್ಯಾಗ್ಜಿನ್ 01 ದೊರೆತಿದೆ.
ಶಸ್ತ್ರಸ್ತಗಳನ್ನು ವಶಕ್ಕೆ ಪಡೆದು, ಜಯಪುರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.
ಈ ಸಂಬಂಧ ಸೆಕ್ಷನ್ 3, 25 (1 ಬಿ), 7 ಮತ್ತು 25 (1 ಎ) ಶಸ್ತ್ರಾಸ್ತ್ರ ಕಾಯ್ದೆ 1959ರ ಅಡಿ ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಮುಖ್ಯವಾಹಿನಿಗೆ ಬಂದ ನಕ್ಸಲರು, ಅದೇ ಕಾಡಿನಿಂದ ಹೊರ ಬಂದಿದ್ದರು.