Webdunia - Bharat's app for daily news and videos

Install App

ಶರಣಾಗತಿ ಬೆನ್ನಲ್ಲೇ ಪತ್ತೆಯಾಯ್ತು ನಕ್ಸಲರ ಎ.ಕೆ 56 ಗನ್‌, ನೂರಾರು ಮದ್ದುಗುಂಡು: ಎಸ್ಪಿ ಹೇಳಿದ್ದೇನು

Sampriya
ಶನಿವಾರ, 11 ಜನವರಿ 2025 (14:32 IST)
Photo Courtesy X
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ ಅವರ ಸಮ್ಮುಖದಲ್ಲಿ ಆರು ನಕ್ಸಲರು ಮುಖ್ಯವಾಹಿನಿಗೆ ಬಂದ ಬೆನ್ನಲ್ಲೇ ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದ್ದಾರೆ.

ಕೊಪ್ಪ ತಾಲ್ಲೂಕಿನ ಜಯಪುರ ವ್ಯಾಪ್ತಿಯ ಕಿತ್ತಲೆಗುಳಿ ಬಳಿಯ ಅರಣ್ಯದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡು ದೊರೆತಿವೆ. ಒಂದು ಎ.ಕೆ-56, ಮೂರು 303 ರೈಫಲ್, ಹನ್ನೆರಡು ಬೋರ್ ಎಸ್‌ಬಿಬಿಎಲ್, ಒಂದು ಸ್ವದೇಶ ನಿರ್ಮಿತ ಬಂದೂಕು ಸಿಕ್ಕಿದೆ.

ಅರಣ್ಯದಲ್ಲಿ 7.62 ಎಂಎಂ ಎ.ಕೆ. ಮದ್ದುಗುಂಡು-11, 303- ರೈಫಲ್ ಮದ್ದುಗುಂಡು 133, 12 ಬೋರ್ ಕಾರ್ಟ್ರಿಡ್ಜಸ್ – 24, ಸ್ವದೇಶ ನಿರ್ಮಿತ ಪಿಸ್ತೂಲ್ ಮದ್ದುಗುಂಡುಗಳು 8 ಸೇರಿ ಒಟ್ಟು 176  ಮದ್ದುಗುಂಡು, ಎ.ಕೆ-56 ಖಾಲಿ ಮ್ಯಾಗ್ಜಿನ್ 01 ದೊರೆತಿದೆ.

ಶಸ್ತ್ರಸ್ತಗಳನ್ನು ವಶಕ್ಕೆ ಪಡೆದು, ಜಯಪುರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.

ಈ ಸಂಬಂಧ ಸೆಕ್ಷನ್ 3, 25 (1 ಬಿ), 7 ಮತ್ತು 25 (1 ಎ) ಶಸ್ತ್ರಾಸ್ತ್ರ ಕಾಯ್ದೆ 1959ರ ಅಡಿ ಜಯಪುರ​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಮುಖ್ಯವಾಹಿನಿಗೆ ಬಂದ‌ ನಕ್ಸಲರು, ಅದೇ ಕಾಡಿನಿಂದ ಹೊರ ಬಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments