Select Your Language

Notifications

webdunia
webdunia
webdunia
webdunia

ಪ್ರಮೋದ್ ಮುತಾಲಿಕ್ ಜತೆ ಕಾಣಿಸಿಕೊಂಡ ನಯನಾ ಮೋಟಮ್ಮ, ಕುತೂಹಲ ಕೆರಳಿಸಿದ ಶಾಸಕಿ ನಡೆ

ಶಾಸಕಿ ನಯನಾ ಮೋಟಮ್ಮ

Sampriya

ಚಿಕ್ಕಮಗಳೂರು , ಗುರುವಾರ, 31 ಜುಲೈ 2025 (15:47 IST)
Photo Credit X
ಚಿಕ್ಕಮಗಳೂರು: ಕೇಸರಿ ಶಾಲು ಧರಿಸಿ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಜೊತೆ ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿತ್ತು. 

ಮೂಡಿಗೆರೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದೂವಾಗಿ, ದಲಿತೆಯಾಗಿ ಮೂಡಿಗೆರೆಯಲ್ಲಿ ಜನಿಸಿದ್ದೇನೆ. ಮುಂದೆ ಬಿಜೆಪಿಗೆ ಹೋಗ್ತಿನೊ, ಕಾಂಗ್ರೆಸ್ಸಿನಲ್ಲೇ ಉಳಿತಿನೋ, ಬಿಎಸ್‌ಪಿ ಅಥವಾ ಎಸ್‌ಡಿಪಿಐ ಸೇರುತ್ತೇನೋ ಎಂಬ ಪ್ರಶ್ನೆಗೆ ಮೂರು ವರ್ಷ ಕಾಯೋಣ ಎಂದರು. 

ಇಂದು ಕೇಸರಿ ಶಾಲು ಹಾಕಿ ಬಂದಿದ್ದೇನೆ. ಪಕ್ಷದ ಕಾರ್ಯಕರ್ತರೂ ಬಂದಿದ್ದಾರೆ. ಈ ಬಗ್ಗೆ ಹಲವರಿಗೆ ಪ್ರಶ್ನೆಗಳಿವೆ. ನದಿ ಎಂದರೆ ಕಾಂಗ್ರೆಸ್ಸಾ, ದಡ ಎಂದರೆ ಬಿಜೆಪಿಯಾ ಎಂಬ ಶಂಕೆ ಬೇಡ ಎಂದರು.

ಕೇಸರಿ ಶಾಲು ಹಾಕಿ ಬಂದಿದ್ದೇನೆ. ಪಕ್ಷದ ಕಾರ್ಯಕರ್ತರೂ ಬಂದಿದ್ದಾರೆ. ಈ ಬಗ್ಗೆ ಹಲವರಿಗೆ ಪ್ರಶ್ನೆಗಳಿವೆ. ನದಿ ಎಂದರೆ ಕಾಂಗ್ರೆಸ್ಸಾ, ದಡ ಎಂದರೆ ಬಿಜೆಪಿಯಾ ಎಂಬ ಶಂಕೆ ಬೇಡ.

ನಾನು ಗಣಪತಿಗಾಗಿ, ಧರ್ಮಕ್ಕಾಗಿ ಬಂದಿದ್ದೇನೆ. ಕಾಂಗ್ರೆಸ್ ಶಾಸಕಿಯಾಗಿಯೂ ನಿಂತಿದ್ದೇನೆ. ಅದರ ಜೊತೆಗೆ ಸಾಕಷ್ಟು ಅಸ್ತಿತ್ವಗಳು ಇವೆ. ಅದನ್ನೆಲ್ಲಾ ಸೇರಿಸಿಕೊಂಡು ನಯನಾ ಮೋಟಮ್ಮ ಆಗಿದ್ದೇನೆ ಎಂದರು. ಯಾರೂ ಕೂಡ ಹುಟ್ಟುವಾಗಲೇ ಇಂತಹ ಜಾತಿ-ಧರ್ಮ, ಹೆಣ್ಣು-ಗಂಡು ಎಂದು ಹುಟ್ಟಿರುವುದಿಲ್ಲ ಎಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ: ಸಂಸತ್ತಿ‌ನಲ್ಲಿ ಗುಡುಗಿದ ಅಮಿತ್ ಶಾ