Webdunia - Bharat's app for daily news and videos

Install App

ಯಡಿಯೂರಪ್ಪ ನಿವಾಸದ ಬಳಿ ಹೊಸಬ ಸಚಿವಾಕಾಂಕ್ಷಿಗಳು ಮತ್ತವರ ಬೆಂಬಲಿಗರ ದಂಡು

Webdunia
ಮಂಗಳವಾರ, 3 ಆಗಸ್ಟ್ 2021 (16:06 IST)
ಬೆಂಗಳೂರು(. 03): ಸಂಪುಟ ವಿಸ್ತರಣೆಗೆ ದೆಹಲಿಗೆ ಹೋಗಿ ಸಿಎಂ ಬಸವರಾಜು ಬೊಮ್ಮಾಯಿ ಕಸರತ್ತು ನಡೆಸುತ್ತಿರುವಂತೆಯೇ ರಾಜ್ಯದಲ್ಲಿ ಸಚಿವಾಕಾಂಕ್ಷಿಗಳ ಎದೆ ಢವ ಢವ ಹೊಡೆದುಕೊಳ್ಳುತ್ತಿದೆ. ಬೊಮ್ಮಾಯಿ ಸರ್ಕಾರದ ಸೂತ್ರಧಾರ ಎಂದೇ ನಂಬಲಾಗಿರುವ ಬಿ ಎಸ್ ಯಡಿಯೂರಪ್ಪ ಬಳಿ ಅನೇಕ ಸಚಿವಾಕಾಂಕ್ಷಿಗಳು ಹಾಗೂ ಅವರ ಬೆಂಬಲಿಗರು ಎಡೆ ತಾಕುತ್ತಿದ್ಧಾರೆ.

ಇನ್ನೂ ಕೆಲವರು ಪ್ರತಿಭಟನೆಗಳ ಮೂಲಕ ಶಕ್ತಿ ಪ್ರದರ್ಶನ ಕೂಡ ಮಾಡುತ್ತಿದ್ಧಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿಯಲ್ಲಿ ಇರುವ ಹಿನ್ನೆಲೆಯಲ್ಲಿ ಬಹುತೇಕ ಸಚಿವಾಕಾಂಕ್ಷಿಗಳು ಯಡಿಯೂರಪ್ಪ ಬಳಿ ತಮ್ಮ ಆಸೆ ಆಕಾಂಕ್ಷೆಗಳನ್ನ ತೋಡಿಕೊಳ್ಳುತ್ತಿರುವುದು ಕಂಡುಬರುತ್ತಿದೆ. ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಶಿರಹಟ್ಟಿ ಶಾಸಕ ರಾಮಪ್ಪ ಲಮಾಣಿ ಅವರು ಯಡಿಯೂರಪ್ಪ ಅವರನ್ನ ಭೇಟಿಯಾಗಿ ತಮಗೆ ಸಚಿವ ಸ್ಥಾನ ಕೊಡಿಸುವಂತೆ ದುಂಬಾಲು ಬಿದ್ದಿದ್ದಾರೆ. ಎಂಪಿ ರೇಣುಕಾಚಾರ್ಯ ಅವರಂತೂ ದೆಹಲಿಯಲ್ಲಿರುವ ಸಿಎಂ ಬೊಮ್ಮಾಯಿ ಅವರನ್ನ ಫೋನ್ ಮೂಲಕವೇ ಸಂಪರ್ಕಿಸಿ ಒತ್ತಡ ಹಾಕುವ ಕೆಲಸ ಮಾಡುತ್ತಿದ್ದಾರೆ.
ಹಾವೇರಿ ಜಿಲ್ಲೆಯ ಶಾಸಕ ನೆಹರೂ ಓಲೇಕಾರ್ ಅವರ ಬೆಂಬಲಿಗರು ಯಡಿಯೂರಪ್ಪ ಅವರ ಕಾವೇರಿ ನಿವಾಸದೆದುರು ಪ್ರತಿಭಟನೆ ನಡೆಸಿದರು. ನೆಹರೂ ಓಲೇಕಾರ್ ಅವರನ್ನ ಮಂತ್ರಿಯಾಗಿ ಮಾಡಿ ನ್ಯಾಯ ಕೊಡಿಸಬೇಕು. ನಾಲ್ಕು ಬಾರಿ ಶಾಸಕರಾಗಿರುವ ಓಲೇಕಾರ್ ಕುಟುಂಬ ಸದಸ್ಯರಿಗೆ ಸಚಿವ ಸ್ಥಾನ ಕೊಡದಿದ್ದರೆ ಮುಖ್ಯಮಂತ್ರಿಗಳು ಹಾವೇರಿ ಜಿಲ್ಲೆಗೆ ಕಾಲಿಡಬಾರದು ಎಂದು ಓಲೇಕಾರ್ ಬೆಂಬಲಿಗರು ಎಚ್ಚರಿಕೆ ನೀಡಿದರು. ಕೊನೆಗೆ ಪೊಲೀಸರು ಮಧ್ಯ ಪ್ರವೇಶಿಸಿ ಪ್ರತಿಭಟನೆ ನಡೆಸದಂತೆ ಅವರೆಲ್ಲರ ಮನವೊಲಿಸಿ ಸುಮ್ಮನಾಗಿಸಿದರು.
ಇನ್ನು, ಸ್ಪೀಕರ್ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಚಿವರಾಗುವ ಬಯಕೆ ವ್ಯಕ್ತಪಡಿಸಿದ್ದಾರೆ. ಕಳೆದೊಂದು ವಾರದಿಂದ ಸಂಪುಟ ಸೇರಲು ಹಲವು ಸರ್ಕಸ್ ನಡೆಸುತ್ತಿದ್ದರೂ ಮೌನವಾಗಿದ್ದ ಕಾಗೇರಿ ಇದೀಗ ಸಂಘ ಪರಿವಾರವನ್ನ ಬಳಸಿ ಸಚಿವ ಸ್ಥಾನಕ್ಕಾಗಿ ಪ್ರಯತ್ನಿಸುತ್ತಿರುವುದು ಗೊತತಾಗಿದೆ. ರಾಷ್ಟ್ರಮಟ್ಟದ ಆರೆಸ್ಸೆಸ್ ಮುಖಂಡರೊಬ್ಬರ ಮೂಲಕ ಕಾಗೇರಿ ಅವರು ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹಾಕಿಸುತ್ತಿದ್ದಾರೆನ್ನಲಾಗಿದೆ.
ಇನ್ನು, ಶಿವಮೊಗ್ಗ ಜಿಲ್ಲೆಯವರೇ ಆದ ಹಾಗೂ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಅರಗ ಜ್ಞಾನೇಂದ್ರ ಕೂಡ ಸಚಿವಾಕಾಂಕ್ಷೆಯನ್ನ ತೋಡಿಕೊಳ್ಳುತ್ತಲೇ ಇದ್ದಾರೆ. ತಮ್ಮ ಜಿಲ್ಲೆಯ ಈಶ್ವರಪ್ಪ ಮತ್ತು ಯಡಿಯೂರಪ್ಪ ಅವರು ಬಿಜೆಪಿ ಸರ್ಕಾರದಲ್ಲಿ ಯಾವಾಗಲೂ ಉನ್ನತ ಹುದ್ದೆಯಲ್ಲಿರುವುದರಿಂದ ತನಗೆ ಅವಕಾಶ ಇರುತ್ತಿರಲಿಲ್ಲ. ಈಗ ಯಡಿಯೂರಪ್ಪ ಇಲ್ಲದಿರುವುದರಿಂದ ತನಗೆ ಮಂತ್ರಿಮಂಡಲದಲ್ಲಿ ಅವಕಾಶ ಕೊಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಇನ್ನು, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ತಮ್ಮ ಬೆಂಬಲಿಗರ ಮೂಲಕವೂ ಸಚಿವ ಸ್ಥಾನಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಈ ಸಂಪುಟದಲ್ಲಿ ವೀರಶೈವ ಲಿಂಗಾಯತರಿಗೆ ಅವಕಾಶ ನೀಡಬೇಕು. ಇದೇ ಸಮುದಾಯಕ್ಕೆ ಸೇರಿದ ಪರಣ್ಣನವರು ಎರಡು ಬಾರಿ ಶಾಸಕರಾಗಿ ಕೆಲಸ ಮಾಡಿದ್ಧಾರೆ. ಅವರಿಗೆ ಈಗ ಸಚಿವರಾಗಲು ಅವಕಾಶ ಕೊಡಬೇಕು ಎಂದು ಬೆಂಬಲಿಗರು ಯಡಿಯೂರಪ್ಪ ನಿವಾಸದ ಬಳಿ ಘೋಷಣೆಗಳ ಮೂಲಕ ಒತ್ತಾಯ ಮಾಡಿದ್ದಾರೆ.
ಶಿರಹಟ್ಟಿ ಕ್ಷೇತ್ರದ ಶಾಸಕ ರಾಮಪ್ಪ ಲಮಾಣಿ ನ್ಯೂಸ್18 ಕನ್ನಡದ ಜೊತೆ ಮಾತನಾಡಿ ತಾನು ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವುದಾಗಿ ಹೇಳಿದ್ಧಾರೆ. ನನ್ನನ್ನು ಮಂತ್ರಿ ಮಾಡುವಂತೆ ಸ್ವಾಮೀಜಿಗಳೂ ಕೂಡ ಒತ್ತಡ ಹಾಕುತ್ತಿದ್ದಾರೆ. ನನ್ನ ಹಾಗೂ ಪಿ ರಾಜೀವ್ ಇಬ್ಬರ ಹೆಸರು ಹೈಕಮಾಂಡ್ನಲ್ಲಿ ಚರ್ಚೆ ಆಗಿದೆ. ರಾಜೀವ್ ಅವರಿಗಿಂತ ನಾನು ಹಿರಿಯನಾಗಿರುವುದರಿಂದ ನನಗೆ ಮಂತ್ರಿ ಸ್ಥಾನ ಸಿಗುವ ವಿಶ್ವಾಸ ಇದೆ. ಅದಕ್ಕಾಗಿ ಸಿಎಂ ಕರೆಗಾಗಿ ನಾನು ಕಾಯುತ್ತಿದ್ದೇನೆ ಎಂದು ರಾಮಪ್ಪ ಲಮಾಣಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments