Publish Date: Sat, 04 Sep 2021 (13:21 IST)
Updated Date: Sat, 04 Sep 2021 (13:23 IST)
ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಪ್ರಕೃತಿ ವಿಪತ್ತನಿಂದ ಅಪಾರ ಹಾನಿ ಸಂಭವಿಸಿದ್ದು, ಇದಕ್ಕೆ ಎನ್ ಡಿಆರ್ ಎಫ್ ನಿಧಿಯಿಂದ ಅಗತ್ಯ ನೆರವು ಸಿಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿ ಉಂಟಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ನೆರವು ಸಿಗುವ ವಿಶ್ವಾಸವಿದೆ ಎಂದರು. ಅಲ್ಲದೇ, ಪ್ರವಾಹ ಪರಿಸ್ಥಿತಿ ಕುರಿತು ಅಧ್ಯಯನ ಡೆಸಲು ಬಂದಿರುವ ಕೇಂದ್ರ ತಂಡದೊಂದಿಗೆ ಸಂಪುಟ ಸಭೆ ಬಳಿಕ ಚರ್ಚೆ ನಡೆಸಲಾಗುವುದು. ಕೇಂದ್ರದ ತಂಡ ಪ್ರವಾಹ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಿದ ಬಳಿಕ ನಷ್ಟದ ಅಂದಾಜು ಬಗ್ಗೆ ಮತ್ತೊಮ್ಮೆ ಸಭೆ ನಡೆಸಲಾಗುವುದು. ಕೇಂದ್ರದಿಂದ ಬಂದಿರುವ ಅಧಿಕಾರಿಗಳ ಜೊತೆಗೆ ಸ್ಥಳೀಯ ಅಧಿಕಾರಿಗಳು ಹೆಚ್ಚು ಹಾನಿ ಸಂಭವಿಸಿರುವ ಪ್ರದೇಶಗಳಿಗೆ ಪ್ರವಾಸ ಕೈಗೊಳ್ಳಲಿದ್ದು, ನಷ್ಟದ ಕುರಿತು ವರದಿ ನೀಡಲಿದ್ದಾರೆ ಎಂದರು.