ದೇಶಾದ್ಯಂತ ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶ ಪರೀಕ್ಷೆ ನಡೆಯುತ್ತಿದೆ.ರಾಜ್ಯದ 1.19 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ.ರಾಜ್ಯದ 63 ವೈದ್ಯಕೀಯ ಕಾಲೇಜುಗಳಿಂದ 7411 ವೈದ್ಯಕೀಯ ಮತ್ತು 2.849 ದಂತ ವೈದ್ಯಕೀಯ ಸೇರಿ 10260 ಸೀಟುಗಳ ಪ್ರವೇಶಕ್ಕೆ ಪರೀಕ್ಷೆ ನಡೆಯುತ್ತಿದೆ.ಮಧ್ಯಾಹ್ನ 12:20 ಕ್ಕೆ ಪರೀಕ್ಷಾ ಕೇಂದ್ರ ಪ್ರವೇಶ ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದ್ದು,ಮಧ್ಯಾಹ್ನ 1:30 ರಿಂದ ಪರೀಕ್ಷೆ ಪ್ರಾರಂಭವಾಗಲಿದೆ.ವಿದ್ಯಾರ್ಥಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನ ಪ್ರವೇಶ ಪತ್ರದಲ್ಲಿ ಈಗಾಗಲೇ ಸೂಚನೆ ನೀಡಲಾಗಿದ್ದು.ಮುನ್ನೆಚ್ಚರಿಕೆ ಕ್ರಮದೊಂದಿಗೆ ಪರೀಕ್ಷೆ ನಡೆಯುತ್ತಿದೆ.