Publish Date: Sun, 30 Jan 2022 (14:42 IST)
Updated Date: Sun, 30 Jan 2022 (17:38 IST)
ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿ ಹಂತದಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯಲು ಅನುಕೂಲವಾಗುವಂತೆ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಥಮ ಪಿಯುಸಿ ಹಂತದಿಂದಲೇ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ತರಬೇತಿ ನೀಡಲಾಗುತ್ತಿದ್ದು, NCERT ಪಠ್ಯಕ್ರಮದ ಅನ್ವಯ & ಪ್ರಥಮ ಪಿಯುಸಿ ಹಂತದಿಂದಲೇ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಸಿಇಟಿ ಮತ್ತು ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ. ಪ್ರತಿ ತಾಲೂಕಿನಲ್ಲಿ ಒಂದು ನೋಡಲ್ ಕಾಲೇಜು ಗುರುತಿಸಿ ತರಬೇತಿ ನೀಡಲಾಗುತ್ತದೆ.