Publish Date: Thu, 12 Sep 2019 (19:32 IST)
Updated Date: Thu, 12 Sep 2019 (19:34 IST)
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಒಂದು ದಿನದ ವೇತನದ ಒಟ್ಟು 1,66,77,724 ರೂ. ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಸ್ತಾಂತರಿಸಲಾಯಿತು.
ಬೆಂಗಳೂರಿನಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಹೀರಾ ನಸೀಮ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಚೆಕ್‍ನ್ನು ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಸೇರಿದಂತೆ ಮತ್ತಿತರು ಇದ್ದರು.
ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಇತ್ತೀಚೆಗೆ ಅಪಾರ ನಷ್ಟ ಉಂಟಾಗಿದೆ. ಈ ಸಂತ್ರಸ್ಥರಿಗೆ ನೆರವಾಗಲು ಸಂಸ್ಥೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಒಂದು ದಿನದ ವೇತನ ನೀಡಿದ್ದು, ಇದಕ್ಕಾಗಿ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.