Webdunia - Bharat's app for daily news and videos

Install App

ಭ್ರಷ್ಟರೂ ಅಲ್ಲ, ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ: ಸುನೀಲ್‌ ಕುಮಾರ್‌ಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ

Sampriya
ಗುರುವಾರ, 9 ಜನವರಿ 2025 (15:55 IST)
ಬೆಂಗಳೂರು: ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಛತ್ತೀಸ್‌ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಪ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ? ಶಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ನಕ್ಸಲ್ ಶರಣಾಗತಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ  ಪೋಸ್ಟ್ ಹಾಕಿದ ಶಾಸಕ ಸುನೀಲ್ ಕುಮಾರ್ ಅವರು ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ.

ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ?ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ - ಉಗ್ರರಿಗೆ ಸುಗ್ಗಿ.ಅವರಿಗೆ ಕ್ಷಮೆ,ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ಎಂದು ಅಸಮಾಧಾನ ಹೊರಹಾಕಿದ್ದರು.

ಇದೀಗ ಸುನೀಲ್‌ ಕುಮಾರ್‌ಗೆ ಕೌಂಟರ್ ನೀಡಿ ಸಿಎಂ ಪೋಸ್ಟ್ ಹಾಕಿದ್ದಾರೆ.

ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್ ದಂಪತಿಗೆ ಅಲ್ಲಿನ ಬಿಜೆಪಿ ಸರ್ಕಾರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು  41 ಲಕ್ಷ ರೂಪಾಯಿಗಳ ನೆರವು ನೀಡಿರುವುದು ಶಾಸಕ ಸುನೀಲ್ ಕುಮಾರ್ ಅವರಿಗೆ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಸುನೀಲ್ ಕುಮಾರ್ ಅವರಿಗೆ ಇದೆಯೇ?

ಶರಣಾಗಿರುವ ಈ ನಕ್ಸಲೀಯರ ಅನುಸರಿಸಿದ ಹಿಂಸಾಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ ಇವರಲ್ಲಿ ಯಾರೂ ಜನರ ತೆರಿಗೆ ಹಣವನ್ನು ನುಂಗಿದ ಭ್ರಷ್ಟರೂ ಅಲ್ಲ, ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ.

ಲಾಠಿ-ದೊಣ್ಣೆ, ಕತ್ತಿ-ತ್ರಿಶೂಲಗಳನ್ನು ನೀಡಿ ಅಮಾಯಕರನ್ನು ಹಿಂಸಾಮಾರ್ಗಕ್ಕೆ ಇಳಿಸಿ ರಾಜಕೀಯ ಲಾಭ ಗಳಿಸುವ ಕುತಂತ್ರದ ರಾಜಕಾರಣ ನಮ್ಮದ್ದಲ್ಲ. ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ ಸಮಾಜದ ಮುಖ್ಯವಾಹಿನಿಗೆ ಸೇರಿಸಿ ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರ್ಕಾರದ ಕರ್ತವ್ಯವಾಗಿದೆ. ಇದೇ ಕರ್ತವ್ಯವನ್ನು ನಮ್ಮ ಸರ್ಕಾರ ಪಾಲಿಸುತ್ತಾ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿದಾರರಿಗೆ ಇಂದು ಗುಡ್ ನ್ಯೂಸ್

Dog viral video: ಚಿರತೆಯಿಂದ ತಮ್ಮ ಗೆಳೆಯನ ರಕ್ಷಿಸಿದ ನಾಯಿಗಳು

India Pakistan: ಪಾಕಿಸ್ತಾನದ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು 400 ಅಲ್ಲ, ಇನ್ಯಾರು

Gruhalakshmi: ಮೂರು ತಿಂಗಳಿನಿಂದ ಬಂದಿಲ್ಲ ಗೃಹಲಕ್ಷ್ಮಿ ಹಣ: ವೋಟ್ ಹಾಕಲ್ಲ ಎಂದ ಮಹಿಳೆಯರು

ಮುಂದಿನ ಸುದ್ದಿ
Show comments