Select Your Language

Notifications

webdunia
webdunia
webdunia
webdunia

ಪ್ರಾಥಮಿಕ ಶಾಲಾ ಹಂತದಲ್ಲಿ ಎನ್‌ಇಪಿ ಜಾರಿ ಮಾಡೋದಿಲ್ಲ : ಮಧು ಬಂಗಾರಪ್ಪ

ಪ್ರಾಥಮಿಕ ಶಾಲಾ ಹಂತದಲ್ಲಿ ಎನ್‌ಇಪಿ ಜಾರಿ ಮಾಡೋದಿಲ್ಲ : ಮಧು ಬಂಗಾರಪ್ಪ
ಬೆಂಗಳೂರು , ಮಂಗಳವಾರ, 11 ಜುಲೈ 2023 (13:43 IST)
ಬೆಂಗಳೂರು : ಯಾವುದೇ ಕಾರಣಕ್ಕೂ ಪ್ರಾಥಮಿಕ ಶಾಲಾ ಹಂತದಲ್ಲಿ ಎನ್ಇಪಿ ಜಾರಿ ಮಾಡೋದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ಎನ್ಇಪಿ ರದ್ದು ಮಾಡುವುದಾಗಿ ಭರವಸೆ ನೀಡಿದ್ದೆವು. ಭರವಸೆ ನೀಡಿದಂತೆ ಎನ್ಇಪಿ ರದ್ದು ಮಾಡುತ್ತೇವೆ ಎಂದರು.

ಪ್ರಾಥಮಿಕ ಶಾಲಾ ಹಂತದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಎನ್ಇಪಿ ಜಾರಿಗೆ ಸಿದ್ಧತೆ ಮಾಡಿತ್ತು. ಆದರೆ ನಾವು ಅದನ್ನು ಜಾರಿ ಮಾಡೋದಿಲ್ಲ. ಎನ್ಇಪಿ ಬದಲಾಗಿ ಹೊಸ ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ ಎಂದು ತಿಳಿಸಿದರು. 


Share this Story:

Follow Webdunia kannada

ಮುಂದಿನ ಸುದ್ದಿ

ತರಕಾರಿ ಬೆಲೆ ಏರಿಕೆಯಿಂದ ವ್ಯಾಪರಿಗಳಿಗೆ ಸಂಕಷ್ಟ