ರೇಣುಕಾಸ್ವಾಮಿ ದೇಶಕ್ಕೋಸ್ಕರ ಪ್ರಾಣ ಕೊಟ್ಟನಾ, ಸರ್ಕಾರಿ ಕೆಲಸ ಯಾಕೆ: ಸಾರ್ವಜನಿಕರಿಂದ ಆಕ್ರೋಶ

Krishnaveni K
ಬುಧವಾರ, 26 ಜೂನ್ 2024 (12:19 IST)
ಬೆಂಗಳೂರು: ತಮ್ಮನ್ನು ಭೇಟಿಯಾದ ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗದ ಭರವಸೆಯಿತ್ತ ಸಿಎಂ ಸಿದ್ದರಾಮಯ್ಯ ನಿರ್ಧಾರದ ಬಗ್ಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ದರ್ಶನ್ ಆಂಡ್ ಗ್ಯಾಂಗ್ ನಿಂದ ಹತ್ಯೆಯಾಗಿದ್ದ ರೇಣುಕಾಸ್ವಾಮಿ ಕುಟುಂಬಕ್ಕೆ ಈಗ ಆಧಾರವಿಲ್ಲದಂತಾಗಿದೆ. ಮನಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಪೋಷಕರು, ಗರ್ಭಿಣಿ ಪತ್ನಿ ಮತ್ತು ವಯೋವೃದ್ಧ ಅಜ್ಜಿ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿದ್ದಾರೆ.

ಈಗಾಗಲೇ ಕೆಲವು ಸಂಘ-ಸಂಸ್ಥೆಗಳು ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಆರ್ಥಿಕ ನೆರವು ನೀಡಿದೆ. ನಿನ್ನೆ ರೇಣುಕಾ ತಂದೆ ಮತ್ತು ತಾಯಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಈ  ವೇಳೆ ತಮ್ಮ ಪುತ್ರಿ ಅಥವಾ ಸೊಸೆಗೆ ಅನುಕಂಪದ ಆಧಾರದಲ್ಲಿ ಸರ್ಕಾರೀ ಉದ್ಯೋಗ ನೀಡಲು ಮನವಿ ಮಾಡಿದ್ದಾರೆ.

ಇದಕ್ಕೆ ಸಿದ್ದರಾಮಯ್ಯ ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅಗತ್ಯ ದಾಖಲೆಗಳನ್ನು ಕಳುಹಿಸಿಕೊಡಲು ತಿಳಿಸಿದ್ದಾರೆ ಎಂದು ರೇಣುಕಾಸ್ವಾಮಿ ತಂದೆ ಮಾಧ್ಯಮಗಳಿಗೆ ಹೇಳಿದ್ದಾರೆ. ಆದರೆ ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸರ್ಕಾರೀ ಉದ್ಯೋಗ ನೀಡುವ ಬಗ್ಗೆ ಸಾರ್ವಜನಿಕರು ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾನೂನಿನಲ್ಲಿ ಮಾನ್ಯತೆಯಿಲ್ಲದಿದ್ದರೂ ಸಲಿಂಗ ವಿವಾಹವಾದ ರಿಯಾ ನೃತ್ಯಪಟು ಯುವತಿಯರು

ಎರ್ನಾಕುಲಂ- ಬೆಂಗಳೂರು ಸೇರಿ 4 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಗ್ರೀನ್‌ಸಿಗ್ನಲ್‌

ಮತಗಳ್ಳತನ ವಿರುದ್ಧ ರಾಜ್ಯದಲ್ಲಿ 1,12,40,000 ಸಹಿ ಸಂಗ್ರಹ: ಡಿಸಿಎಂ ಡಿ.ಕೆ. ಶಿವಕುಮಾರ್

ಅಕ್ರಮವಾಗಿ ಅದಿರು ಸಾಗಣೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ಗೆ ಮತ್ತೆ ಸಂಕಷ್ಟ

ಬಿಜೆಪಿ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 98ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರ ಶುಭಾಶಯ

ಮುಂದಿನ ಸುದ್ದಿ
Show comments