ಪರಪ್ಪನ ಅಗ್ರಹಾರ ಕರ್ಮಕಾಂಡಕ್ಕೆ ನೆಪ ಹೇಳಿದ ಸಿಎಂಗೆ ದರ್ಶನ್ ವಿಚಾರದಲ್ಲಿರುವ ಅರ್ಜೆಂಟ್ ಈಗ್ಯಾಕಿಲ್ಲ ಎಂದ ನೆಟ್ಟಿಗರು

Krishnaveni K
ಸೋಮವಾರ, 10 ನವೆಂಬರ್ 2025 (09:43 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳ ಐಷಾರಾಮಿ ಜೀವನಶೈಲಿ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯಗೆ ದರ್ಶನ್  ವಿಚಾರದಲ್ಲಿ ಇದ್ದ ಅರ್ಜೆಂಟ್ ಈಗ್ಯಾಕಿಲ್ಲ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರು, ರೌಡಿ ಶೀಟರ್ ಗಳು ಬಿಂದಾಸ್ ಆಗಿ ಮೊಬೈಲ್ ಬಳಸುವುದು, ಎಣ್ಣೆ ಪಾರ್ಟಿ ಮಾಡುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು. ಇದನ್ನು ನೋಡಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಈ  ವಿಚಾರ ಸರ್ಕಾರಕ್ಕೆ ಈಗ ಮುಜುಗರ ತಂದಿದೆ. ಇದಕ್ಕೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ ‘ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು. ನಾಳೆ ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು’ ಎಂದಿದ್ದಾರೆ.

ಆದರೆ ಜೈಲಿನ ಅವ್ಯವಸ್ಥೆಗೆ ಅಧಿಕಾರಿಗಳ ರಜೆ ನೆಪ ಹೇಳಿರುವುದಕ್ಕೆ ನೆಟ್ಟಿಗರು ಗರಂ ಆಗಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ರಜೆ ಮೇಲಿದ್ದರೆ ಉಳಿದ ಅಧಿಕಾರಿಗಳು ಏನು ಮಾಡುತ್ತಿದ್ದರು? ಎಂದು ಪ್ರಶ್ನೆ ಮಾಡಿದ್ದಾರೆ. ನಿಮಗೆ ಎಲ್ಲಾ ಆದ ಮೇಲೇನೇ ಗೊತ್ತಾಗೋದು ಎಂದು ಇನ್ನೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ. ಮತ್ತೊಬ್ಬರು ದರ್ಶನ್ ವಿಚಾರದಲ್ಲಿ ತಕ್ಷಣವೇ ಕೋರ್ಟ್ ಗೆ ಹೋಗಿ ಅರ್ಜೆಂಟ್ ಮಾಡಿದ್ದ ನಿಮಗೆ ಈಗ ಈ ವಿಚಾರದಲ್ಲಿ ಅರ್ಜೆಂಟ್ ಇಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಆರ್ ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಬೇಕು, ಬೆಂಗಳೂರು ಏರ್ ಪೋರ್ಟ್ ನಲ್ಲೇ ನಮಾಜ್ ಮಾಡಬಹುದಾ

ಆರ್ ಎಸ್ಎಸ್ ಗೆ ಪ್ರಿಯಾಂಕ್ ಖರ್ಗೆ ಪ್ರಶ್ನಾವಳಿ: ಇದೇ ಶ್ರಮ ನಿಮ್ಮ ಇಲಾಖೆಯಲ್ಲಿ ಮಾಡಿದ್ರೆ ಎಲ್ಲೋ ಇರ್ತಿದ್ವಿ

Karnataka Weather: ಈ ವಾರದಿಂದ ಮಳೆ ಕಡಿಮೆಯಾಗುತ್ತಾ, ಇಲ್ಲಿದೆ ವಾರದ ಹವಾಮಾನ ವರದಿ

ಕಮಲ ಕೆರೆಯಲ್ಲಿ, ತೆನೆ ಹೊಲದಲ್ಲಿದ್ದರೆ ಚೆಂದ: ಡಿಕೆ ಶಿವಕುಮಾರ್‌

ಆಹಾರ ಅರಸಿ ಬಂದ ಕಾಡಾನೆಗಳು ಹಾರೋಬೆಲೆ ಡ್ಯಾಂನಲ್ಲಿ ಮುಳುಗಿ ಸಾವು

ಮುಂದಿನ ಸುದ್ದಿ
Show comments