Select Your Language

Notifications

webdunia
webdunia
webdunia
webdunia

ಹೊಸ ಬಾಂಬ್: ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದ ಸಚಿವ!

ಹೊಸ ಬಾಂಬ್: ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದ ಸಚಿವ!
ಮಂಗಳೂರು , ಸೋಮವಾರ, 4 ಫೆಬ್ರವರಿ 2019 (14:09 IST)
ಬಿಜೆಪಿ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ಕರ್ನಾಟಕಕ್ಕೆ ಅಗೌರವ ತರುವ ಪ್ರಯತ್ನ ನಡೆಸುತ್ತಿದೆ. ಆದರೆ ನಮ್ಮ ಜೊತೆಗೆ ಬಿಜೆಪಿ ಶಾಸಕರೂ ಸಂಪರ್ಕದಲ್ಲಿದ್ದಾರೆ. ಅದು ಯಾರೆಂದು ಹೇಳಲಾರೆ ಎಂದು ಸಚಿವರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್ ಗೆ ಬಜೆಟ್ ಮಂಡನೆ ವೇಳೆ ಶಾಸಕರ ಗೈರು ಭೀತಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಚಿವ ಯುಟಿ ಖಾದರ್ ಪ್ರತಿಕ್ರಿಯೆ ನೀಡಿದ್ದು, ನಮಗೆ ಯಾವುದೇ ಭೀತಿ ಇಲ್ಲ. ಬಿಜೆಪಿಯವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಜನರು ಅವರಿಗೆ ಸ್ಪಷ್ಟ ಬಹುಮತ ನೀಡಿಲ್ಲ. ಸಮ್ಮಿಶ್ರ ಸರಕಾರಕ್ಕೆ ಬೆಂಬಲ ಕೊಡುವುದು ಬಿಟ್ಟು, ಸರಕಾರ ಉರುಳಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿದರು.

ಈಗ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಅದರಲ್ಲಿ ಕರಾವಳಿಯ ಬಿಜೆಪಿ ಶಾಸಕರು ಇದ್ದಾರೋ ಇಲ್ಲವೋ ಗೊತ್ತಿಲ್ಲ ಎಂದು ಮಂಗಳೂರಿನಲ್ಲಿ ಸಚಿವ ಯುಟಿ ಖಾದರ್ ಹೊಸ ಬಾಂಬ್ ಸಿಡಿಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಹಿಂದು ಮಹಾಸಭಾ ಕಾರ್ಯದರ್ಶಿ ನಡೆಗೆ ಖಂಡನೆ: ಕಾಂಗ್ರೆಸ್ ನಿಂದ ಪ್ರತಿಭಟನೆ