ಬೆಂಗಳೂರು : ಇಂದು ಸಂಜೆ 4.30ಕ್ಕೆ ವಿಧಾನಸೌಧದ ಎದುರುಗಡೆ ಜೆಡಿಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ2ನೇ ಬಾರಿ ಹೆಚ್.ಡಿ ಕುಮಾರ ಸ್ವಾಮಿ ಅವರು ಹಾಗೂ ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಹೆಚ್.ಡಿ ಕುಮಾರಸ್ವಾಮಿ ಅವರು ದೇವರು ಹಾಗೂ ಕನ್ನಡ ನಾಡಿನ ಜನತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರ ಮಾಡಿದರೆ, ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಅವರು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರ ಮಾಡಿದ್ದಾರೆ. ರಾಜ್ಯಪಾಲ ವಿ.ಆರ್.ವಾಲಾ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಹೆಚ್.ಡಿ ದೇವೇಗೌಡ್ರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಚಂದ್ರಬಾಬಯ ನಾಯ್ದು, ಎರಡು ಪಕ್ಷದ ಶಾಸಕರು, ಸಂಸದರು, ನಾಯಕರುಗಳು ಭಾಗವಹಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ