ಕರ್ನಾಟಕ ಹೈಕೋರ್ಟ್‌ಗೆ ಹೊಸ ಸಿಜೆ

Webdunia
ಭಾನುವಾರ, 10 ಅಕ್ಟೋಬರ್ 2021 (12:01 IST)
ಬೆಂಗಳೂರು : ಕರ್ನಾಟಕ ಹೈಕೋರ್ಟ್ಗೆ ಮುಖ್ಯನ್ಯಾಯಮೂರ್ತಿಗಳನ್ನಾಗಿ ರಿತುರಾಜ್ ಅವಸ್ಥಿ ಅವರನ್ನು ನೇಮಿಸಲಾಗಿದೆ. ಈ ಕುರಿತು ಕೇಂದ್ರ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ.

ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯನ್ಯಾಯಮೂರ್ತಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಸತೀಶ್ ಚಂದ್ರ ಅವರನ್ನು ತೆಲಂಗಾಣ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿದೆ.
ರಿತುರಾಜ್ ಅವರು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದರು. 1960ರಲ್ಲಿ ಹುಟ್ಟಿರುವ ನ್ಯಾ.ರಿತುರಾಜ್ ಅವರು, ಲಖನೌ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿದ್ದು, 1987ರಿಂದ ವಕೀಲಿ ವೃತ್ತಿ ಕೈಗೊಂಡಿದ್ದರು. ಅಲಹಬಾದ್ ಹೈಕೋರ್ಟ್ನ ಲಖನೌ ಪೀಠದಿಂದ ಇವರು ವೃತ್ತಿ ಆರಂಭಿಸಿದ್ದಾರೆ. 2009ರಲ್ಲಿ ಲಖನೌ ಪೀಠದಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡು 2010ರಲ್ಲಿ ಕಾಯಂ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದಾರೆ.
ಇದೇ ವೇಳೆ ಕರ್ನಾಟಕದ ನ್ಯಾಯಮೂರ್ತಿಯಾಗಿದ್ದ ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ ಸೇರಿದಂತೆ ಇದೇ ವೇಳೆ ದೇಶದ 8 ರಾಜ್ಯಗಳ ಹೈಕೋರ್ಟ್ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕಾತಿ ನಡೆದಿದೆ.
ಉಳಿದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದವರು:
ಅಲಹಾಬಾದ್- ನ್ಯಾ.ರಾಜೇಶ್ ಬಿಂದಾಲ್
ಮೇಘಾಲಯ- ನ್ಯಾ.ರಂಜಿತ್ ವಿ. ಮೊರೆ
ಕೋಲ್ಕತಾ- ನ್ಯಾ.ಪ್ರಕಾಶ್ ಶ್ರೀವಾಸ್ತವ
ಮಧ್ಯಪ್ರದೇಶ- ನ್ಯಾ. ಆರ್.ವಿ. ಮಳೀಮಠ
ಆಂಧ್ರಪ್ರದೇಶ- ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ರಾಮಮಂದಿರದ ಮುಡಿಗೆ ಭಗವಾಧ್ವಜವೇರಿದ ಆ ಕ್ಷಣ ಹೇಗಿತ್ತು: ವಿಡಿಯೋ ನೋಡಿ

ಬಿಜೆಪಿ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಗಾಗಿ ವಿಶೇಷ ಕಾರ್ಯಕ್ರಮ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಮುಂದಿನ ಸುದ್ದಿ
Show comments