Select Your Language

Notifications

webdunia
webdunia
webdunia
webdunia

ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ ಹೊಸ ರೂಪ: ಪೂರ್ವಭಾವಿ ಸಭೆಯಲ್ಲಿ ಸಿಎಂ ಸ್ಪಷ್ಟನೆ

ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ ಹೊಸ ರೂಪ: ಪೂರ್ವಭಾವಿ ಸಭೆಯಲ್ಲಿ ಸಿಎಂ ಸ್ಪಷ್ಟನೆ
bangalore , ಗುರುವಾರ, 24 ಫೆಬ್ರವರಿ 2022 (19:31 IST)
ಬೆಂಗಳೂರು; 2022-23 ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ ಹೊಸ ಸ್ವರೂಪ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
2022-23 ನೇ ಸಾಲಿನ  ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ನಡೆದ  ಇಲಾಖಾವಾರು ಆಯವ್ಯಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಬಕಾರಿ ಉದ್ಯಮ ವ್ಯಾಪ್ತಿ ಹೆಚ್ಚಿಸಿಕೊಂಡಿದೆ. ಯಾವುದೆ ಉದ್ಯಮ ವ್ಯಾಪ್ತಿ ಹೆಚ್ಚಿಸಿಕೊಂಡಾಗ ಬದಲಾವಣೆ ಆಗಲು ಸಮಯ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾಲ ಕಾಲಕ್ಕೆ ವಿಚಾರಣೆ ಮಾಡಿ ಸರಿಪಡಿಸುವುದು ಎಲ್ಲರ ಕೆಲಸ ಎಂದರು.
ಇಲಾಖೆ ಬಗ್ಗೆ ಸಹಾನೂಭೂತಿ ಇದೆ. ಹಾಗೇಯೆ ಇಲಾಖೆಯಲ್ಲಿ ನಡೆಯುತ್ತಿರುವ ಕಿರುಕುಳ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ವ್ಯವಸ್ಥೆಯಲ್ಲಿ ಬದಲಾವಣೆ ತರಲು ಬಜೆಟ್‌ನಲ್ಲಿ ಇಲಾಖೆಗೆ ಹೊಸ ಸ್ವೂರಪ ನೀಡಲಾಗುವುದು. ಆರ್ಥಿಕ ಮಿತಿಗಳನ್ನು ನೋಡಿಕೊಂಡು ನೌಕರರಿಗೆ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಲಾಗುವುದಲ್ಲೆದೆ ಕಾನೂನುಗಳನ್ನು ಬದಲಾಯಿಸುವ ಸಂಬಂಧ ಗಮನಹರಿಸಲಾಗುವುದು ಎಂದರು.
ರಾಜ್ಯದಲ್ಲಿ ನಕಲಿ ಮದ್ಯ ತಯಾರಿಕೆ ಮತ್ತು ಹೊರ ರಾಜ್ಯದಲ್ಲಿ ಆಗಮಿಸುವ ನಕಲಿ ಮದ್ಯ ತಡೆಗೆ ಸರ್ಕಾರ ಉಗ್ರ ಕ್ರಮ ಕೈಗೊಂಡಿದೆ. ಇದರಿಂದ ಸರ್ಕಾರಕ್ಕೆ ಆದಾಯ ಕೂಡ ಬರುತ್ತದೆ. ನಕಲಿ ಜಾಲದ ಹಿಂದೆ ಯಾರೇ ಇದ್ದರೂ ಅವರನ್ನು ಮುಲಾಜಿಲ್ಲದೇ ಅಮಾನತು ಮಾಡುವಂತೆ ಇಲಾಖಾ ಆಯುಕ್ತರಿಗೆ ಇದೇ ಸಂದರ್ಭದಲ್ಲಿ ಸಿಎಂ ಸೂಚಿಸಿದರು.
ಸಿಎಲ್ 7, ಸಿಎಲ್ 9 ವಿಚಾರದಲ್ಲಿ ಸಾಕಷ್ಟು ದೂರುಗಳು ಬಂದಿವೆ.ಇದೆಲ್ಲವನ್ನೂ ಸರಿಪಡಿಸುವ ಕೆಲಸ ಆಗಬೇಕು. ವ್ಯಾಪಾರ, ಆದಾಯ ಮೂರು ಮುಖ್ಯ ಅಂಶಗಳನ್ನು ಇಟ್ಟುಕೊಂಡು ಕೆಲಸಮಾಡುವಂತೆ ಸೂಚಿಸಿದರಲ್ಲದೇ ಸಮಯ ನೀಡಿದರೆ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

10 ಗ್ರಾಂ ಚಿನ್ನದ ಬೆಲೆ 1,400 ರೂಪಾಯಿ ಏರಿಕೆ, ಇದು ವರ್ಷದಲ್ಲೇ ಅಧಿಕ