Select Your Language

Notifications

webdunia
webdunia
webdunia
webdunia

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಹೊಸ ಮನೆ

New home for Praveen Nettaru family
ಸುಳ್ಯ , ಶುಕ್ರವಾರ, 28 ಏಪ್ರಿಲ್ 2023 (19:00 IST)
ಕಳೆದ ವರ್ಷ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ನೀಡಿದ ಮಾತನ್ನು ಬಿಜೆಪಿ ಉಳಿಸಿಕೊಂಡಿದೆ. ಕೊಟ್ಟ ಮಾತಿನಂತೆಯೇ 10 ತಿಂಗಳಲ್ಲಿ ಪ್ರವೀಣ್ ಕುಟುಂಬಕ್ಕೆ ಸುಸಜ್ಜಿತ ಮನೆ ನಿರ್ಮಿಸಿ ಕೊಡಲಾಗಿದೆ. ಈ ವೇಳೆ ಪ್ರವೀಣ್ ಪತ್ನಿಗೆ ಉದ್ಯೋಗ ನೀಡುವ ಭರವಸೆಯನ್ನು ಬಿಜೆಪಿ ಸರ್ಕಾರ ನೀಡಿತ್ತು. ಪ್ರವೀಣ್ ಪತ್ನಿಗೆ ಸದ್ಯ ‌ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ‌ಕಚೇರಿಯಲ್ಲಿ ಉದ್ಯೋಗ ನೀಡಲಾಗಿದೆ. 2022ರಲ್ಲಿ ನವೆಂಬರ್ 2ರಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮನೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದರು. ಸದ್ಯ ವೇಗವಾಗಿ ಮನೆ ನಿರ್ಮಾಣ ಪೂರ್ಣಗೊಂಡಿದೆ. ಪ್ರವೀಣ್ ಹತ್ಯೆ ವೇಳೆ ಬಿಜೆಪಿಗೆ ದೊಡ್ಡ ಪ್ರಮಾಣದಲ್ಲಿ ಡ್ಯಾಮೇಜ್ ಆಗಿತ್ತು. ಸಂಸದರ ವಾಹನಕ್ಕೆ ಮುತ್ತಿಗೆ ಹಾಕಿ ಜನರು ಆಕ್ರೋಶ ಹೊರಹಾಕಿದ್ರು. ಇದೀಗ ಮನೆ ನಿರ್ಮಿಸಿಕೊಡುವ ಮೂಲಕ ಡ್ಯಾಮೇಜ್ ಸರಿಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ. ಪ್ರವೀಣ್ ‌ನೆಟ್ಟಾರು ಕನಸಿನ 60 ಲಕ್ಷ ವೆಚ್ಚದ ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ದ‌.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರುವಿನಲ್ಲಿ 2,700 ಚ.ಅಡಿಯ ವಿಸ್ತಾರದಲ್ಲಿ ಮುಗ್ರೋಡಿ ಕನ್ಸ್ಟ್ರಕ್ಷನ್ ಮನೆ ನಿರ್ಮಾಣ ಮಾಡಿದೆ. 2022ರ ನವೆಂಬರ್ 2ರಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮನೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದರು. ಇಂದು ಪ್ರವೀಣ್ ನೆಟ್ಟಾರು ಗೃಹ ಪ್ರವೇಶಕ್ಕೆ ಬಿಜೆಪಿ ನಾಯಕರು ಆಗಮಿಸಿ, ಕಾರ್ಯಕರ್ತರೊಂದಿಗೆ ಬಿಜೆಪಿ ಸದಾ ಇರಲಿದೆ ಎಂಬ ಸಂದೇಶವನ್ನು ರವಾನಿಸಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಅಭ್ಯರ್ಥಿಗೆ ಹಣ ಕೊಟ್ಟ ಮತದಾರರು