Select Your Language

Notifications

webdunia
webdunia
webdunia
webdunia

ಒಂದೇ ದಿನದಲ್ಲಿ 2,86,384 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ ; ಸಾವಿನ ಸಂಖ್ಯೆಯಲ್ಲೂ ಏರಿಕೆ

ಒಂದೇ ದಿನದಲ್ಲಿ 2,86,384 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ ; ಸಾವಿನ ಸಂಖ್ಯೆಯಲ್ಲೂ ಏರಿಕೆ
bangalore , ಗುರುವಾರ, 27 ಜನವರಿ 2022 (21:14 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,86,384 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.19.59ಕ್ಕೆ ಏರಿಕೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 573 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 491700ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 2202472 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 306357 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 37677328 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 22,35,267 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,63,84,39,207 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 14,62,261 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಭರಣ ಪ್ರಿಯರಿಗೆ ಬಿಗ್ ಶಾಕ್ ; ಚಿನ್ನ - ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ