ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿಯನ್ನು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಡುಗಡೆಗೊಳಿಸಿದ್ದು, ಎಲ್ಲ ವರ್ಗದ ನಾಯಕರಿಗೆ ಪಟ್ಟಿಯಲ್ಲಿ ಸ್ಥಾನ ನೀಡಿದ್ದಾರೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾಗಿ ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಸಿ.ಟಿ. ರವಿ, ಎನ್. ಅರುಣ್ ಕುಮಾರ್ ಹೆಸರು ಆಯ್ಕೆಯಾಗಿದೆ. ರಾಜ್ಯ ಕಾರ್ಯದರ್ಶಿಗಳಾಗಿ ಸಂಸದ ಕರಡಿ ಸಂಗಣ್ಣ, ಸಂಸದ ಸುರೇಶ್ ಅಂಗಡಿ, ಮಾಜಿ ಸಂಸದೆ ತೇಜಸ್ವಿನಿ, ಜಗದೀಶ್ ಹಿರೇಮನಿ, ಶಾಸಕರ ಸುರೇಶ್ ಗೌಡ, ಮಾಜಿ ಶಾಸಕ ಶಂಕರಪ್ಪ, ಪೂರ್ಣಿಮಾ ಶ್ರೀನಿವಾಸ್, ತಿಂಗಳೆ ವಿಕ್ರಮಾರ್ಜುನ ಹೆಗಡೆ, ಮುನಿರಾಜುಗೌಡ, ಎಂ. ಜಯದೇವ ಸ್ಥಾನ ಪಡೆದುಕೊಂಡಿದ್ದಾರೆ.
ಉಪಾಧ್ಯಕ್ಷರ ಪಟ್ಟಿಯಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ. ಸೋಮಶೇಖರ್, ಮಾಜಿ ಸಚಿವ ಬಾಬೂರಾವ್ ಚೌಹಾಣ್, ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್, ಸಂಸದ ಅನಂತಕುಮಾರ್, ಸಂಸದ ಪಿ.ಸಿ. ಮೋಹನ್,
ಸಂಸದ ಬಿ. ಶ್ರೀರಾಮುಲು, ನಾಗರತ್ನ, ನಾಗರಾಜು, ನಿರ್ಮಲ್ ಕುಮಾರ್ ಸುರಾನಾ ಅವರು ಸ್ಥಾನ ಪಡೆದುಕೊಂಡಿದ್ದಾರೆ.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.