Select Your Language

Notifications

webdunia
webdunia
webdunia
webdunia

ನೂತನ ಪಾರ್ಕಿಂಗ್‌ ನೀತಿ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ

ನೂತನ ಪಾರ್ಕಿಂಗ್‌ ನೀತಿ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ
bangalore , ಗುರುವಾರ, 22 ಸೆಪ್ಟಂಬರ್ 2022 (21:24 IST)
ಬೆಂಗಳೂರಿನ ವಾಹನ ಸವಾರರಿಗೆ ಗುಣಮಟ್ಟದ ರಸ್ತೆ ಕಲ್ಪಿಸಲು ಸಾಧ್ಯವಾಗದ ಬಿಜೆಪಿಯ 40% ಸರ್ಕಾರವು ಈಗ ನೂತನ ಪಾರ್ಕಿಂಗ್‌ ನೀತಿ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ಮುಂದಾಗಿರುವುದು ಖಂಡನೀಯ ಎಂದು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ ಹೇಳಿದರು.ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋಹನ್‌ ದಾಸರಿ, ಭಾನುವಾರವು ರಜಾ ದಿನವಾಗಿದ್ದರೂ ಕೂಡ ಸೆಪ್ಟೆಂಬರ್‌ 18ರ ಭಾನುವಾರದಂದು ಟೆಂಡರ್‌ಗೆ ಆಹ್ವಾನ ಕರೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೆಟಿಪಿಪಿ ಕಾಯಿದೆ ಪ್ರಕಾರ ಟೆಂಡರ್‌ಗೆ 40 ದಿನಗಳ ಕಾಲಾವಕಾಶ ನೀಡಬೇಕಾಗಿದ್ದರೂ ಕೇವಲ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಎಂಟು ವಲಯಗಳಲ್ಲೂ ಎಂಟು ಗುತ್ತಿಗೆದಾರರನ್ನು ಪೂರ್ವನಿಗದಿ ಮಾಡಿಕೊಂಡಿದ್ದು, ಕೇವಲ ನಾಮಕಾವಸ್ತೆಗಾಗಿ ಟೆಂಡರ್‌ ಕರೆಯಲಾಗಿದೆ ಎಂದು ಆರೋಪಿಸಿದರು.
 
ಆಮ್‌ ಆದ್ಮಿ ಪಾರ್ಟಿಯ  ಪಾರ್ಕಿಂಗ್‌ಗೆ ದುಬಾರಿ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿರುವುದನ್ನು ಬೆಂಗಳೂರಿನ ಜನರು ಈಗ ಸಹಿಸಿಕೊಂಡರೆ, ಮುಂದಿನ ದಿನಗಳಲ್ಲಿ ಸರ್ಕಾರವು ಶುಲ್ಕವನ್ನು ಇನ್ನಷ್ಟು ಏರಿಕೆ ಮಾಡುವ ಸಾಧ್ಯತೆಯಿದೆ. ವರ್ಷಕ್ಕೆ ಸುಮಾರು 200 ಕೋಟಿ ರೂಪಾಯಿಯನ್ನು ಈ ಮೂಲಕ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಇದೊಂದು ದಂಧೆಯಾಗಿ ಮಾರ್ಪಾಡಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದ್ದು, ಜನರು ಕಟ್ಟುವ ಶುಲ್ಕವು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜೇಬು ಸೇರಲಿದೆ. ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆಯನ್ನು ಬಗೆಹರಿಸಲು ಮೀನಾಮೀಷ ಎಣಿಸುವ ಜನವಿರೋಧಿ ಸರ್ಕಾರವು ಜನರಿಂದ ವಸೂಲಿ ಮಾಡಲು ಮಾತ್ರ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 

Share this Story:

Follow Webdunia kannada

ಮುಂದಿನ ಸುದ್ದಿ

ಅಹೋರಾತ್ರಿ ಧರಣಿಗೆ ನಿರ್ಧರಿಸಿದ ಜೆಡಿಎಸ್‌