ಎಂಜಿನಿಯರಿಂಗ್ ವಿದ್ಯಾರ್ಥಿಗಳೇ ಗಮನಿಸಿ, ಇನ್ಮೇಲೆ ಹೊಸ ರೂಲ್ಸ್

Krishnaveni K
ಸೋಮವಾರ, 23 ಜೂನ್ 2025 (10:49 IST)
ಬೆಂಗಳೂರು: ರಾಜ್ಯದ ಎಲ್ಲಾ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ಗಮನಕ್ಕೆ. ಇನ್ನು ಮುಂದೆ ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹೊಸ ನಿಯಮಗಳು ಜಾರಿಗೆ ಬರಲಿವೆ.

ರಾಜ್ಯದಲ್ಲಿ ಇತ್ತೀಚೆಗೆ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಡ್ರಗ್ಸ್, ರಾಗಿಂಗ್, ಲೈಂಗಿಕ ಕಿರುಕುಳ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ಇವುಗಳಿಗೆ ಕಡಿವಾಣ ಹಾಕಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ ಹೊಸ ನಿಯಮಗಳನ್ನು ಜಾರಿಗೆ ತರಲು ಆದೇಶ ನೀಡಿದೆ.

ಅದರಂತೆ ಇನ್ನು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕ್ಯಾಂಪಸ್ ಚಟುವಟಿಕೆಗಳ ಮೇಲೆ ನಿಗಾ ಇಡಲು ಸಿಸಿಟಿವಿ ಅಳವಡಿಕೆ ಕಡ್ಡಾಯವಾಗಿದೆ. ಕಾಲೇಜಿನ ಎಲ್ಲಾ ಮೂಲೆಗಳಲ್ಲೂ ಡ್ರಗ್ಸ್, ಅನೈತಿಕ ಚಟುವಟಿಕೆಗಳ ವಿರುದ್ಧ ಜಾಗೃತಿ ಮೂಡಿಸುವ ಫಲಕಗಳನ್ನು ಅಳವಡಿಸಬೇಕು. ವಿದ್ಯಾರ್ಥಿಗಳು ಡ್ರಗ್ಸ್, ಕಿರುಕುಳದಂತಹ ಪ್ರಕರಣಗಳಲ್ಲಿ ಕಂಡುಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮವನ್ನುಆಯಾ ಕಾಲೇಜುಗಳೇ ಕೈಗೊಳ್ಳಬೇಕು. ಇನ್ನು, ಕಿರುಕುಳಕ್ಕೊಳಗಾದವರಿಗೆ ಸಾಂತ್ವನ ಹೇಳಲು ಎಲ್ಲಾ ಕಾಲೇಜುಗಳು ಕಡ್ಡಾಯವಾಗಿ ಆಪ್ತ ಸಮಾಲೋಚಕರನ್ನು ನೇಮಿಬೇಕು ಎಂದು ನಿಯಮ ರೂಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ