ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ತೆರಳುವವರಿಗೆ ಹೊಸ ರೂಲ್ಸ್

Krishnaveni K
ಬುಧವಾರ, 25 ಜೂನ್ 2025 (13:06 IST)
Photo Credit: X
ಮೈಸೂರು: ಆಷಾಢ ಶುಕ್ರವಾರಕ್ಕೆ ಮೈಸೂರಿನಲ್ಲಿರುವ ನಾಡದೇವತೆ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆಯಲು ತೆರಳುವವರಿಗೆ ಹೊಸ ನಿಯಮ ಮಾಡಲಾಗಿದ್ದು ಇದನ್ನು ಸಾರ್ವಜನಿಕರು ತಪ್ಪದೇ ಗಮನಿಸಬೇಕು.

ಇದೇ ಶುಕ್ರವಾರದಿಂದ ಆಷಾಢ ಶುಕ್ರವಾರ ಶುರುವಾಗುತ್ತದೆ. ಈ ಹಿನ್ನಲೆಯಲ್ಲಿ ಚಾಮುಂಡಿ ದೇವತೆಗೆ ವಿಶೇಷ ಪೂಜೆಯಿರುತ್ತದೆ. ಆಷಾಢ ಶುಕ್ರವಾರ ಹಿನ್ನಲೆಯಲ್ಲಿ ಸಾಕಷ್ಟು ಜನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಹೀಗಾಗಿ ಬೆಟ್ಟದಲ್ಲಿ ಜನಜಂಗುಳಿ ಸಾಮಾನ್ಯವಾಗಿರುತ್ತದೆ.

ಈ ಹಿನ್ನಲೆಯಲ್ಲಿ ಈ ಬಾರಿ ವಾರಂತ್ಯದಲ್ಲಿ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅದರ ಬದಲು ಸರ್ಕಾರವೇ ಬಸ್ ಆಯೋಜಿಸಿದೆ. ಅದರ ಲಾಭ ಪಡೆದುಕೊಳ್ಳಬಹುದು. 2,000 ರೂ. ಕೊಟ್ಟರೆ ಎಸಿ ಬಸ್ ನಲ್ಲಿ ಬೆಟ್ಟಕ್ಕೆ ಕರೆದೊಯ್ದು ದರ್ಶನ ಪಡೆದು ಬರಬಹುದಾಗಿದೆ.

ಇನ್ನು ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಖಾಸಗಿ ವಾಹನಗಳಿಗೆ ಬೆಟ್ಟಕ್ಕೆ ಪ್ರವೇಶವಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಹೀಗಾಗಿ ಮೈಸೂರಿಗೆ ಭೇಟಿ ನೀಡುವವರು ವಾರಂತ್ಯದಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳುವುದಿದ್ದರೆ ಈ ಪ್ರಕಟಣೆಯನ್ನು ಗಮನಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments