Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿ?

ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿ?
ಗದಗ , ಶುಕ್ರವಾರ, 1 ಮೇ 2020 (20:56 IST)
ಜನತೆಗೆ ಕಡಿಮೆ ದರದಲ್ಲಿ ಸುಲಭ ಹಾಗೂ ಪಾರದರ್ಶಕವಾಗಿ ಮರಳು ದೊರೆಯಬೇಕು. ಈ ನಿಟ್ಟಿನಲ್ಲಿ ಸರಕಾರ ಮುಂದಾಗಿದೆ ಎಂದು ಸಚಿವರೊಬ್ಬರು ತಿಳಿಸಿದ್ದಾರೆ.

ತೆಲಂಗಾಣ ರಾಜ್ಯದ ಮರಳು ನೀತಿಯನ್ನು ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ರಾಜ್ಯದಲ್ಲಿ ಜಾರಿಗೊಳಿಸಲು ರಾಜ್ಯ ಸಚಿವ ಸಂಪುಟದಿಂದ ಅನುಮೋದನೆ ನೀಡಲಾಗಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.

ಹೊಸ ಮರಳು ನೀತಿಯನ್ವಯ ಹಳ್ಳ, ತೊರೆ, ಕೆರೆಗಳಲ್ಲಿನ ಮರಳು ನಿಕ್ಷೇಪಗಳನ್ನು ಗ್ರಾಮ ಪಂಚಾಯತಿ ಅನುಮತಿಯೊಂದಿಗೆ ರೈತರೇ ನೇರವಾಗಿ ಮರಳನ್ನು ತೆಗೆಯಬಹುದಾಗಿದೆ ಎಂದರು.

ಗ್ರಾಮಪಂಚಾಯತ ವ್ಯಾಪ್ತಿಯಲ್ಲಿ ನಿರ್ವಹಿಸುವ ಸಮುದಾಯಿತ್ವ ಕಾಮಗಾರಿಗಳು, ಮನೆ, ರಸ್ತೆ ಕಾಮಗಾರಿಗಳಿಗೆ ಲಘು ವಾಹನ ಮತ್ತು ಎತ್ತಿನ ಗಾಡಿಗಳ ಮೂಲಕ ಮರಳು ಸಾಗಾಣಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ನದಿ, ಆಣೆಕಟ್ಟುಗಳ ಹಿನ್ನೀರಿನ ಪ್ರದೇಶಗಳಲ್ಲಿನ ಮರಳು ನಿಕ್ಷೇಪಗಳನ್ನು ಸರ್ಕಾರಿ ಸ್ವಾಮ್ಯದ ನಿಗಮ ಮಂಡಳಿಗಳ ಮೂಲಕ ಗ್ರಾಹಕರಿಗೆ ಜಿಲ್ಲಾ ಮರಳು ಸಮಿತಿ ನಿಗದಿ ಪಡಿಸಿದ ದರದಲ್ಲಿ ಮರಳು ಪಡೆಯುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎ೦ದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ ನಿಯಂತ್ರಣಕ್ಕೆ ಪ್ಲಾಸ್ಮಾ ಥೆರಪಿ ಬಳಕೆ ಎಂದ ಶ್ರೀರಾಮುಲು