ಹುಬ್ಬಳ್ಳಿ: ಇಲ್ಲಿಂದ ಜೋಧ್ ಪುರಕ್ಕೆ ನೇರ ಸಂಪರ್ಕ ಕಲ್ಪಿಸುವ ರೈಲು ಸೇವೆ ಆರಂಭಗೊಂಡಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗುಡ್ ನ್ಯೂಸ್ ನೀಡಿದ್ದಾರೆ.
ಹಬ್ಬಳ್ಳಿ ಜೋಧ್ ಪುರ ನಡುವೆ ನೇರ ರೈಲು ಸಂಪರ್ಕ ಜನರ ಬಹುದಿನಗಳ ಕನಸಾಗಿತ್ತು. ಅದೀಗ ನೆರವೇರಿದೆ. ಈ ಬಗ್ಗೆ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ. ಗಣೇಶ ಹಬ್ಬದ ಈ ಶುಭ ಸಂದರ್ಭದಲ್ಲಿ ಹುಬ್ಬಳ್ಳಿಯ ಜನತೆಗೆ ಸಂತಸದ ವಿಷಯ. ನಮ್ಮ ಭಾಗದ ಬಹು ಜನರ ಬೇಡಿಕೆಯಾಗಿದ್ದ ಹುಬ್ಬಳ್ಳಿ- ಜೋಧಪುರ್ ನೇರ ರೈಲು ಮುಂದಿನ ತಿಂಗಳಿನಿಂದ ಪ್ರಾರಂಭವಾಗಲಿದೆ. ಈ ಕುರಿತು ನಾನು ನಿರಂತರವಾಗಿ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ ಅವರೊಂದಿಗೆ ಸಂಪರ್ಕದಲ್ಲಿದ್ದು ಮನವಿ ಸಲ್ಲಿಸಿದ್ದೆ. ಈಗ ನಮ್ಮ ಮನವಿಗೆ ಸ್ಪಂದಿಸಿದ ಸಚಿವರು ಹುಬ್ಬಳ್ಳಿಯಿಂದ ಜೋಧ್‌ಪುರಕ್ಕೆ ನೇರ ರೈಲು ಆರಂಭಕ್ಕೆ ಅನುಮೋದನೆ ನೀಡಿದ್ದಾರೆ.
ರೈಲು ಸಂಖ್ಯೆ: 07359 UBL (ಹುಬ್ಬಳ್ಳಿ) ಯಿಂದ 7:30ಕ್ಕೆ ತೆರಳಿ ಬೆಳಿಗ್ಗೆ 5:30ಕ್ಕೆ BGKT (ಭಗತ ಕಿ ಕೋಟಿ)ಗೆ ತಲುಪಲಿದೆ. ಪ್ರತಿ ರವಿವಾರ ಸಂಚರಿಸುವ ಈ ರೈಲಿನ ಟಿಕೆಟ್ ಬುಕಿಂಗ್ ಈಗಾಗಲೇ ಆರಂಭವಾಗಿದೆ. ಪ್ರಸ್ತುತ ಇದು ವಿಶೇಷ ರೈಲಾಗಿದ್ದು ಇದನ್ನು ನಿಯತಕಾಲಿಕವಾಗಿ ಪರಿವರ್ತಿಸಲಾಗುವುದು.
ನಮ್ಮ ಮನವಿಗೆ ಸ್ಪಂದಿಸುತ್ತ ಈ ಭಾಗದ ರೈಲ್ವೆ ಅಭಿವೃದ್ಧಿಗೆ ವಿಶೇಷ ಆಸಕ್ತಿ ಹೊಂದಿರುವ ಶ್ರೀ ನರೇಂದ್ರ ಮೋದಿ ಅವರಿಗೆ, ಕೇಂದ್ರ ರೈಲ್ವೆ ಸಚಿವರಾದ ಮಾನ್ಯ ಶ್ರೀ ಅಶ್ವಿನಿ ವೈಷ್ಣವ ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ಅವರಿಗೆ ಅನಂತ ಧನ್ಯವಾದಗಳು ಎಂದಿದ್ದಾರೆ.