ಹುಬ್ಬಳ್ಳಿಯಿಂದ ಜೋಧ್ ಪುರಕ್ಕೆ ನೇರ ರೈಲು: ಸಮಯ, ಬುಕಿಂಗ್ ಮಾಹಿತಿ ಇಲ್ಲಿದೆ

Krishnaveni K
ಶುಕ್ರವಾರ, 29 ಆಗಸ್ಟ್ 2025 (14:14 IST)
ಹುಬ್ಬಳ್ಳಿ: ಇಲ್ಲಿಂದ ಜೋಧ್ ಪುರಕ್ಕೆ ನೇರ ಸಂಪರ್ಕ ಕಲ್ಪಿಸುವ ರೈಲು ಸೇವೆ ಆರಂಭಗೊಂಡಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗುಡ್ ನ್ಯೂಸ್ ನೀಡಿದ್ದಾರೆ.

ಹಬ್ಬಳ್ಳಿ ಜೋಧ್ ಪುರ ನಡುವೆ ನೇರ ರೈಲು ಸಂಪರ್ಕ ಜನರ ಬಹುದಿನಗಳ ಕನಸಾಗಿತ್ತು. ಅದೀಗ ನೆರವೇರಿದೆ. ಈ ಬಗ್ಗೆ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ. ‘ಗಣೇಶ ಹಬ್ಬದ ಈ ಶುಭ ಸಂದರ್ಭದಲ್ಲಿ ಹುಬ್ಬಳ್ಳಿಯ ಜನತೆಗೆ ಸಂತಸದ ವಿಷಯ. ನಮ್ಮ ಭಾಗದ ಬಹು ಜನರ ಬೇಡಿಕೆಯಾಗಿದ್ದ ಹುಬ್ಬಳ್ಳಿ- ಜೋಧಪುರ್ ನೇರ ರೈಲು ಮುಂದಿನ ತಿಂಗಳಿನಿಂದ ಪ್ರಾರಂಭವಾಗಲಿದೆ. ಈ ಕುರಿತು ನಾನು ನಿರಂತರವಾಗಿ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ ಅವರೊಂದಿಗೆ ಸಂಪರ್ಕದಲ್ಲಿದ್ದು ಮನವಿ ಸಲ್ಲಿಸಿದ್ದೆ. ಈಗ ನಮ್ಮ ಮನವಿಗೆ ಸ್ಪಂದಿಸಿದ ಸಚಿವರು ಹುಬ್ಬಳ್ಳಿಯಿಂದ ಜೋಧ್‌ಪುರಕ್ಕೆ ನೇರ ರೈಲು ಆರಂಭಕ್ಕೆ ಅನುಮೋದನೆ ನೀಡಿದ್ದಾರೆ.

ರೈಲು ಸಂಖ್ಯೆ: 07359 UBL (ಹುಬ್ಬಳ್ಳಿ) ಯಿಂದ 7:30ಕ್ಕೆ ತೆರಳಿ ಬೆಳಿಗ್ಗೆ 5:30ಕ್ಕೆ BGKT (ಭಗತ ಕಿ ಕೋಟಿ)ಗೆ ತಲುಪಲಿದೆ. ಪ್ರತಿ ರವಿವಾರ ಸಂಚರಿಸುವ ಈ ರೈಲಿನ ಟಿಕೆಟ್ ಬುಕಿಂಗ್ ಈಗಾಗಲೇ ಆರಂಭವಾಗಿದೆ. ಪ್ರಸ್ತುತ ಇದು ವಿಶೇಷ ರೈಲಾಗಿದ್ದು ಇದನ್ನು ನಿಯತಕಾಲಿಕವಾಗಿ ಪರಿವರ್ತಿಸಲಾಗುವುದು.

ನಮ್ಮ ಮನವಿಗೆ ಸ್ಪಂದಿಸುತ್ತ ಈ ಭಾಗದ ರೈಲ್ವೆ ಅಭಿವೃದ್ಧಿಗೆ ವಿಶೇಷ ಆಸಕ್ತಿ ಹೊಂದಿರುವ ಶ್ರೀ ನರೇಂದ್ರ ಮೋದಿ ಅವರಿಗೆ, ಕೇಂದ್ರ ರೈಲ್ವೆ ಸಚಿವರಾದ ಮಾನ್ಯ ಶ್ರೀ ಅಶ್ವಿನಿ ವೈಷ್ಣವ ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ಅವರಿಗೆ ಅನಂತ ಧನ್ಯವಾದಗಳು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಮುಂದಿನ ಸುದ್ದಿ
Show comments