ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಹೊಸ ತಿರುವು: ತನಿಖೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

Sampriya
ಬುಧವಾರ, 18 ಜೂನ್ 2025 (15:02 IST)
Photo Credit X
ಬೆಂಗಳೂರು: ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಂಚಿಸಿದ ಆರೋಪ ಹೊತ್ತ ಐಶ್ವರ್ಯ ಗೌಡ ವಂಚನೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.

ರಾಜ್ಯದ ಹಲವು ಪೊಲೀಸ್ ಠಾಣೆಯಲ್ಲಿ ಐಶ್ವರ್ಯ ಗೌಡ ವಿರುದ್ಧ ಕೇಸ್ ದಾಖಲಾಗಿತ್ತು. ರಾಜರಾಜೇಶ್ವರಿ ನಗರ, ಚಂದ್ರಾಲೇಔಟ್, ಮಂಡ್ಯ ಸೇರಿ ಹಲವಾರು ಕಡೆ ಕೇಸ್ ದಾಖಲಾಗಿತ್ತು. 

ಈಗ ಐಶ್ವರ್ಯ ಗೌಡ ವಂಚನೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಸಿಡಿಆರ್ ಪ್ರಕರಣ ಹೊರತು ಪಡಿಸಿ ಉಳಿದ ಪ್ರಕರಣದ ತನಿಖೆ ನಡೆಸಲು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಸಿಐಡಿಯ ಆರ್ಥಿಕ ಅಪರಾಧ ವಿಭಾಗಕ್ಕೆ ಕೇಸ್ ವರ್ಗಾವಣೆ ಮಾಡಲಾಗಿದೆ. 

ಪ್ರಕರಣ ಸಂಬಂಧ ಬ್ಯಾಟರಾಯನಪುರ ಉಪವಿಭಾಗದ ಪೊಲೀಸರು ಕೇಸ್‌ನ ತನಿಖೆ ನಡೆಸಿದ್ದರು. ಇದೀಗ ಮುಂದಿನ ತನಿಖೆಗೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಮತ್ತೊಂದು ಕಡೆ ಇಡಿಯಿಂದ ಕೂಡ ವಂಚನೆ ಕೇಸ್ ತನಿಖೆ ನಡೆಯುತ್ತಿದೆ. 

ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಐಶ್ವರ್ಯ ಗೌಡಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದರು. ಆದಾದ ಬಳಿಕ ಮಾಜಿ ಸಂಸದ ಡಿ.ಕೆ ಸುರೇಶ್ ಕೂಡ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಇಡಿ ನೋಟಿಸ್ ಕೊಟ್ಟಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ಮುಂದಿನ ಸುದ್ದಿ
Show comments