Publish Date: Tue, 16 Mar 2021 (13:13 IST)
Updated Date: Tue, 16 Mar 2021 (13:29 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಎಸ್ ಐಟಿ ವಿಚಾರಣೆ ವೇಳೆ ರಮೇಶ್ ಜಾರಕಿಹೊಳಿ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ವಿಡಿಯೋ ಮುಂದಿಟ್ಟು 5 ಕೋಟಿಗೆ ಡಿಮ್ಯಾಂಡ್ ಮಾಡಿದ್ದರು. ವಿಡಿಯೋ ವಿಚಾರ ತನಗೆ 4 ತಿಂಗಳ ಹಿಂದೆಯೇ ಗೊತ್ತಿತ್ತು. ಮಾಜಿ ಶಾಸಕ ನಾಗರಾಜ್ ಮೂಲಕ ತನಗೆ ವಿಚಾರ ತಿಳಿದಿತ್ತು. 5 ಕೋಟಿಗೆ ಡಿಮ್ಯಾಂಡ್ ಇಟ್ಟಿರೋ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.
ರಾಜಕೀಯವಾಗಿ ನನ್ನ ತೇಜೋವಧೆ ಮಾಡಲು ಹೀಗೆ ಮಾಡಿದ್ದಾರೆ. ವಿಡಿಯೋದಲ್ಲಿ ಇರುವುದು ನಾನಲ್ಲ. ಅದಕ್ಕೂ ನಂಗೂ ಸಂಬಂಧವಿಲ್ಲ. ನನ್ನ ವಿರುದ್ಧ ನಕಲಿ ವಿಡಿಯೋ ಸೃಷ್ಟಿ ಮಾಡಿದ್ದಾರೆ. ಹಲವಾರು ಜನರು ಇದರಲ್ಲಿ ಭಾಗಿಯಾಗಿದ್ದಾರೆ, ಅವರನ್ನು ಪತ್ತೆ ಮಾಡಿ ಎಂದು ರಮೇಶ್ ಜಾರಕಿಹೊಳಿ ಎಸ್ ಐಟಿ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.