Select Your Language

Notifications

webdunia
webdunia
webdunia
webdunia

ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೇಗಿರಲಿದೆ ನ್ಯೂ ಇಯರ್ ಸೆಲೆಬ್ರೆಷನ್?

ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೇಗಿರಲಿದೆ ನ್ಯೂ ಇಯರ್ ಸೆಲೆಬ್ರೆಷನ್?
ಬೆಂಗಳೂರು , ಭಾನುವಾರ, 26 ಡಿಸೆಂಬರ್ 2021 (16:36 IST)
ಇಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನ್ಯೂ ಇಯರ್ ಸೆಲೆಬ್ರೆಷನ್ಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಹೊಸವರ್ಷ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ. ಹೋಟೆಲ್‌ಗಳಲ್ಲಿ ಶೇಕಡಾ 50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು ಹೋಟೆಲ್, ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಶೇಕಡಾ 50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಹೀಗಾಗಿ ಈ ಬಾರಿ ಕೂಡ ಹೊಸ ವರ್ಷ ಆಚರಣೆಗೆ ಬ್ರೇಕ್ ಬಿದ್ದಿದೆ. ಮಹಾಮಾರಿ ಕೊರೊನಾದಿಂದ ಕಳೆದ ವರ್ಷ ಕೂಡ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿತ್ತು. ಈ ಬಾರಿ ಕೂಡ ಸಾರ್ವಜನಿಕ ಸ್ಥಳದಲ್ಲಿ ಹೊಸವರ್ಷ ಕಾರ್ಯಕ್ರಮಗಳಿಗೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ.

ಅಲ್ಲದೆ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷದ ಆಚರಣೆಗೆ ಅನುಮತಿ ಇಲ್ಲ ಎಂದು ಬೆಂಗಳೂರು ಪೊಲೀಸರು ಶನಿವಾರ ತಿಳಿಸಿದ್ದರು.

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಶನಿವಾರ ಮಾತನಾಡಿ, ಹೊಸ ವರ್ಷವನ್ನು ಆಚರಿಸಲು ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಮುಂಚಿತವಾಗಿ ಬುಕ್ಕಿಂಗ್ ಹೊಂದಿರುವ ಜನರಿಗೆ ಪಬ್‌ಗಳು, ಹೋಟೆಲ್ ಮತ್ತು ಕ್ಲಬ್‌ಗಳಿಗೆ ಭೇಟಿ ನೀಡಲು ಅನುಮತಿ ಇದೆ.


Share this Story:

Follow Webdunia kannada

ಮುಂದಿನ ಸುದ್ದಿ

ಒಮಿಕ್ರಾನ್ ಭೀತಿ ;ಒಂದೇ ದಿನ 14 ಮಂದಿಗೆ ಸೋಂಕು ಧೃಡ!