Publish Date: Mon, 01 Jan 2018 (18:45 IST)
Updated Date: Mon, 01 Jan 2018 (18:47 IST)
ಹೊಸ ವರ್ಷದ ಆಚರಣೆ ಸುಸೂತ್ರವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಎಲ್ಲ ಕಡೆಯೂ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯುವಕ-ಯುವತಿಯರು ಸೇರಿದಂತೆ ಒಂದು ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು. ಆದರೆ, ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ ಎಂದಿದ್ದಾರೆ.
ಬಿಜೆಪಿಯವರು ಚುನಾವಣೆಗಾಗಿ ಹಿಂದು ಧರ್ಮ ರಾಜಕಾರಣ ಮಾಡುತ್ತಾರೆ ಎಂದು ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಜನರು ನಮ್ಮ ಪರವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಶೋಭಾ ಕರಂದ್ಲಾಜೆ ಬಂಧಿಸುವಂತೆ ಸವಾಲು ಹಾಕಿದ್ದಾರೆ. ಆದರೆ, ನಾನು, ಸಿದ್ದರಾಮಯ್ಯನವರು ಶೋಭಾ ಅವರನ್ನು ಬಂಧಿಸಲು ಆಗುತ್ತದೆಯೇ, ಕಾನೂನು ತನ್ನ ಕೆಲಸ ಮಾಡುತ್ತದೆ ಎಂದು ಉತ್ತರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.