Daily Horoscope

Select Your Language

Notifications

webdunia
webdunia
webdunia
webdunia

ಗರ್ಭಿಣಿಯಾಗಿದ್ದಾಗ ಅನಾರೋಗ್ಯ, ಮದುವೆಯಾದ 2 ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

Shivmogga Newly Married Girl Suicide
ಶಿವಮೊಗ್ಗ: ಮದುವೆಯಾದ 2 ತಿಂಗಳಿಗೆ ನವವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ  ಶರಣಾಗಿರುವ ಘಟನೆ ಸೊರಬ ತಾಲ್ಲೂಕಿನ ಹಣಜಿ ಗ್ರಾಮದಲ್ಲಿ ವರದಿಯಾಗಿದೆ.

ಆತ್ಮಹತ್ಯೆಗೆ ಶರಣಾದ ನವವಿಹಾತೆಯನ್ನು ಸ್ವಾತಿ (24) ಎಂದು ಗುರುತಿಸಲಾಗಿದೆ.  ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಸ್ವರೂಪ್‌ನನ್ನು ಸ್ವಾತಿ ಮದುವೆಯಾಗಿದ್ದಳು. ಗರ್ಭಿಣಿಯಾಗಿದ್ದ ಆಕೆಗೆ ಅನಾರೋಗ್ಯದ ಸಮಸ್ಯೆ ಕಾಣಿಸಿಕೊಂಡಿದೆ.

20 ದಿನಗಳ ಹಿಂದೆ ಹಣಜಿ ಗ್ರಾಮದ ತವರು ಮನೆಗೆ ಸ್ವಾತಿ ಬಂದಿದ್ದಳು. 

ಪೋಷಕರು ಜಮೀನು ಕೆಲಸಕ್ಕೆ ಹೋಗಿದ್ದಾಗ ಇದನ್ನು ಗಮನಿಸಿದ ಅಕ್ಕಪಕ್ಕದವರು ಹೊಲದಲ್ಲಿದ್ದ ಮೃತರ ತಂದೆ ತಾಯಿಗೆ ವಿಷಯ ತಿಳಿಸಿ, ಮನೆಯ ಬಾಗಿಲು ಮುರಿಯಲು ಮುಂದಾಗಿದ್ದಾರೆ. 

ಬಾಗಿಲು ಮುರಿದು ಸ್ವಾತಿಯನ್ನ ಸೀರೆ ಕುಣಿಕೆಯಿಂದ ಬಿಡಿಸಿ ಆಸ್ಪತ್ರೆಗೂ ರವಾನಿಸಿದ್ದಾರೆ. ಆದರೆ ಆಕೆಯನ್ನು ಉಳಿಸುವ ಪ್ರಯತ್ನ ವಿಫಲವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕುಟುಂಬದವರ ಮಾಹಿತಿಯಂತೆ ಆರೋಗ್ಯ ಸಮಸ್ಯೆಯಿಂದ ತುಂಬಾ ವಾಂತಿಯಾಗುತ್ತಿತ್ತು. ಸರಿಯಾಗಿ ಊಟ, ತಿಂಡಿ ಮಾಡುತ್ತಿರಲಿಲ್ಲ ಎನ್ನಲಾಗಿದೆ. ಸದ್ಯ ಇದೇ ಕಾರಣಕ್ಕೆ ಆಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈ: ಶಾಲಾ ಬಸ್ ಮೇಲೆ ಬಿದ್ದ ಮರ, 10ಮಕ್ಕಳಿಗೆ ಗಾಯ, ಒಂದು ಮಗುವಿನ ರಕ್ಷಣೆಗೆ ನಿರಂತರ ಕಾರ್ಯಾಚರಣೆ