9 ದಿನಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ಅಪಹರಣ?

Webdunia
ಭಾನುವಾರ, 8 ಜುಲೈ 2018 (14:50 IST)
9 ದಿನದ ಹಿಂದೆ ವಿವಾಹವಾಗಿದ್ದ ನವ ವಿವಾಹಿತೆಯೊಬ್ಬಳನ್ನು   ವ್ಯಕ್ತಿಯೊಬ್ಬ ಅಪಹರಿಸಿರುವ ಕುರಿತು ಅಪಹರಣಕ್ಕೊಳಗಾದ ವಿವಾಹಿತಳ ಪತಿ ಇಲ್ಲಿನ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ.


ಕಾರವಾರ ತಾಲೂಕಿನ ಬಾಡದ ನಿವಾಸಿ ಸಚಿನ್ ನಾಯ್ಕ ಎಂಬುವವರು ಜೂನ್ 28 ರಂದು ಅಂಕೋಲಾ ತಾಲೂಕಿನ  ಅವರ್ಸಾದ ದಿವ್ಯಾ ನಾಯ್ಕ ಎಂಬ ಯುವತಿಯನ್ನು ವಿವಾಹವಾಗಿದ್ದರು.ವಿವಾಹದ ಬಳಿಕ ಅನ್ಯೋನ್ಯವಾಗಿದ್ದ ಈ ದಂಪತಿ ಜುಲೈ 2 ಮತ್ತು 3ಕ್ಕೆ ಗ್ರಾಮ ದೇವರು,ಕುಲ ದೇವರಿಗೆ ಪೂಜೆ ಸಲ್ಲಿಸಿ ಬಂದಿದ್ದರು.

ಅದರ ಬಳಿಕ ಜುಲೈ 4 ರಂದು ದಿವ್ಯಾಳ ತವರು ಮನೆಗೆ ನೆಂಟರ ಊಟಕ್ಕೆಂದು ತೆರಳಿದ್ದ ದಂಪತಿಗೆ,ಸಂಪ್ರದಾಯದಂತೆ ನವ ವಧು ಐದು ದಿನ ತವರು ಮನೆಯಲ್ಲೇ ಇರಬೇಕೆಂದು ದಿವ್ಯಾಳ ಕುಟುಂಬದವರು ತಿಳಿಸಿದ್ದಾರೆ. ಅದರಂತೆ ದಿವ್ಯಾಳನ್ನು ತವರು ಮನೆಯಲ್ಲೇ ಬಿಟ್ಟು ಸಚಿನ್ ಮನೆಗೆ ವಾಪಾಸಾಗಿದ್ದಾನೆ. 

ತದ ನಂತರ ಜುಲೈ 6 ರ ಬೆಳಿಗ್ಗಿನವರೆಗೂ ಕರೆ ಮಾಡಿ ಮಾತನಾಡಿದ ದಿವ್ಯಾ 6 ರ ಸಂಜೆ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾಳೆ.ಬಟ್ಟೆ ಹೊಲಿಯಲು ಕೊಟ್ಟು ಬರುವುದಾಗಿ ತವರು ಮನೆಯಿಂದ ಹೊರಟ ದಿವ್ಯಾ ಈವರೆಗೂ ವಾಪಾಸಾಗಿಲ್ಲ. ಆದರೆ, ಜುಲೈ 7ರಂದು ಗದಗ ಮೂಲದ ದಿಲನ್ ಎಂಬುವವನು ಸಚಿನ್ ಗೆ ಕರೆಮಾಡಿ, ದಿವ್ಯಾಳನ್ನು ಅಪಹರಿಸಿರುವುದಾಗಿ ಹಾಗೂ ಆಕೆಯನ್ನು ಹುಡುಕಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿದ್ದಾನೆ.

ಇದರಿಂದಾಗಿ ಭಯಭೀತರಾಗಿರುವ ಸಚಿನ್ ಕುಟುಂಬ ದಿವ್ಯಾಳನ್ನು ಹುಡುಕಿಕೊಡುವಂತೆ ಅಂಕೋಲಾ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ. ಅವಳ ಮೈಮೇಲೆ ಒಡವೆಗ ಳಿದ್ದು, ಅವುಗಳಿಗಾಗಿ ಅಥವಾ ಇನ್ಯಾವುದೋ ಕಾರಣಕ್ಕೆ ಆಕೆಯನ್ನು ಅಪಹರಿಸಿರಬಹುದು ಎಂದು ಸಚಿನ್ ಅಭಿಪ್ರಾಯಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments