Select Your Language

Notifications

webdunia
webdunia
webdunia
webdunia

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ: ಖರ್ಗೆ ಭವಿಷ್ಯ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ: ಖರ್ಗೆ ಭವಿಷ್ಯ
ನಂಜನಗೂಡು , ಶನಿವಾರ, 1 ಏಪ್ರಿಲ್ 2017 (17:54 IST)
ಮುಂದಿನ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
 
ಉಪಚುನಾವಣೆಯ ಕಾಂಗ್ರೆಸ್ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿಯವರಿಗೆ ಯಾವತ್ತೂ ರೈತರ, ದಲಿತರ, ಶೋಷಿತರ ಬಗ್ಗೆ ಕಾಳಜಿಯಿಲ್ಲ. ಬಿಜೆಪಿಯವರು ಕೇವಲ ಭಾಷಣದಲ್ಲಿ ಮಾತ್ರ ಸಮಾನತೆಯ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
 
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟು ಸುಲಭವಲ್ಲ. ಬಿಜೆಪಿಗೆ ಮೂರನೇ ಸ್ಥಾನ ಲಭಿಸುತ್ತದೆ ಎಂದು ಭವಿಷ್ಯ ನುಡಿದರು.
 
ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ಖಚಿತ. ಬಿಜೆಪಿ ಅಭ್ಯರ್ಥಿಗಳ ಸೋಲು ನಿಶ್ಚಿತ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‌ನ ಹಣಬಲ ಗೆಲ್ಲಲಿದೆಯೋ, ಬಿಜೆಪಿ ಜನಬಲ ಗೆಲ್ಲಲಿದೆಯೋ ನೋಡೋಣ: ಈಶ್ವರಪ್ಪ