ಮುಂದೇ ನಾನೇ ಜೀನ್ಸ್ ಪಾರ್ಕ್ ಉದ್ಘಾಟಿಸಲು ಬರುತ್ತೇನೆ : ರಾಹುಲ್ ಗಾಂಧಿ

Webdunia
ಶನಿವಾರ, 29 ಏಪ್ರಿಲ್ 2023 (09:57 IST)
ಕಲಬುರಗಿ : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ರಾಜ್ಯಕ್ಕೆ ಆಗಮಿಸಿ ಬಳ್ಳಾರಿ ಹಾಗೂ ಕಲಬುರಗಿಯಲ್ಲಿ ಪ್ರಚಾರ ಕಾರ್ಯಕ್ರಮವನ್ನು ನಡೆಸಿದ್ದಾರೆ.
 
ಬಳ್ಳಾರಿ ತೆರಳಿದ ರಾಹುಲ್ ಗಾಂಧಿ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಬಿ ನಾಗೇಂದ್ರ ಹಾಗೂ ಬಳ್ಳಾರಿ ನಗರ ಅಭ್ಯರ್ಥಿ ಭರತ ರೆಡ್ಡಿ ಪರವಾಗಿ ಪ್ರಚಾರ ಕಾರ್ಯ ನಡೆಸಿದರು. ಟಿಬಿ ಸ್ಯಾನಿಟೋರಿಯಂ ನಿಂದ ರಾಹುಲ್ ಗಾಂಧಿ ರೋಡ್ ಶೋ ಆರಂಭವಾಗಿ ಬೆಳಗಲ್ ಕ್ರಾಸ್, ಕೌಲ್ ಬಜಾರ್ ಮಾರ್ಗವಾಗಿ ಮೋತಿ ಸರ್ಕಲ್ ವರೆಗೆ ಸಾಗಿತ್ತು. ಬಳಿಕ ರಾಹುಲ್ ಗಾಂಧಿ ಮೋತಿ ಸರ್ಕಲ್ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ರಾಹುಲ್, ರಾಜ್ಯದಲ್ಲಿ ಚುನಾವಣೆ ನಡೆಯುತ್ತಿದೆ. 5 ವರ್ಷದ ಹಿಂದೆ ಚುನಾವಣೆ ನಡೆದಿತ್ತು. ನಿಮ್ಮ ಮತ ಪಡೆದು ಬಿಜೆಪಿಯವರು ಸರ್ಕಾರ ರಚನೆ ಮಾಡಿಲ್ಲ.

ನಮ್ಮ ಎಮ್ಎಲ್ಎಗಳನ್ನು ಖರೀದಿ ಮಾಡಿ ಸರ್ಕಾರ ಮಾಡಿದ್ದಾರೆ. 40% ಸರ್ಕಾರವನ್ನು ಕಿತ್ತು ಹಾಕಬೇಕು. ಜೆಪಿಯವರಿಗೆ 40 ನಂಬರ್ ಚೆನ್ನಾಗಿ ಒಪ್ಪುತ್ತೆ. ಅವರಿಗೆ 40 ಸೀಟ್ ಮಾತ್ರ ನೀಡಿ. ಕಾಂಗ್ರೆಸ್ಗೆ 140-150 ಸೀಟ್ ಗೆಲ್ಲಿಸಬೇಕಾಗಿದೆ. ಕಾಂಗ್ರೆಸ್ ಸರ್ಕಾರ 5 ತರಹದ ಗ್ಯಾರಂಟಿ ನೀಡಲಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments