Publish Date: Tue, 28 Jun 2022 (20:37 IST)
Updated Date: Tue, 28 Jun 2022 (20:40 IST)
ರಾಜ್ಯದ ರೈತರ ಸಾಲ ನೀತಿ ಬದಲಾಯಿಸಬೇಕು, ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ ನೃಪತುಂಗ ರೋಡ್ ನಲ್ಲಿರುವ ರಿಸರ್ವ್ ಬ್ಯಾಂಕ್ ಮುಂದೆ ರೈತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕುರುಬೂರು ಶಾಂತ ಕುಮಾರ್ 20 ದಿನಗಳ ಹಿಂದೆಯೇ ನಾವು ಬೆಂಗಳೂರು ಆರ್ ಬಿ ಐ ಮುಖ್ಯಸ್ಥರಿಗೆ ಪತ್ರ ಬರೆದಿದ್ವಿ. ಆದರೆ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈಗ ನಮ್ಮ ಜೊತೆಗೆ ಮಾತುಕತೆ ಮಾಡ್ತೀವಿ ಅಂತಿದ್ದಾರೆ. ಇದು ಆರ್ ಬಿ ಐ ಅಧಿಕಾರಿಗಳ ಕರ್ತವ್ಯ ಲೋಪ. ರೈತರಿಗೆ ಸಾಲ ನೀಡುವ ಸಂದರ್ಭದಲ್ಲಿ ಸಿಬಿಲ್ ಸ್ಕೋರ್ ನೋಡಿ ಸಾಲ ನೀಡಬಾರದು ಆಕ್ರೋಶ ವ್ಯಕ್ತಪಡಿಸಿದ್ದಾರೆ.