ಮುಂಬರುವ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಪತನಗೊಳ್ಳಲಿದ್ದು, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ದೇಶದ ಪ್ರಧಾನಿ ಆಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಇಂದಿರಾ ಗಾಂಧಿ ಶತಮಾನೋತ್ಸವದ ಅಂಗವಾಗಿ ಕುಂದಾನಗರಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಮಾತನಾಡಿದ ಅವರು, ಅಗತ್ಯ ನೋಟುಗಳನ್ನು ಮುದ್ರಿಸದೇ ಏಕಾಏಕಿ 500, 1000 ಮುಖಬೆಲೆಯ ನೋಟುಗಳನ್ನು ನಿಷೇಧ ಮಾಡಿರುವ ನಿರ್ಧಾರ ತೆಗೆದುಕೊಂಡಿದ್ದು ತಪ್ಪು. ಇದರ ಪರಿಣಾಮವಾಗಿ ಮುಂಬರುವ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಪತನಗೊಳ್ಳಲಿದೆ. ಮುಂದಿನ ಚುನಾವಣೆಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಏಕಾಏಕಿ ನೋಟು ನಿಷೇಧ ಮಾಡಿರುವುದರಿಂದ ಶೇ.87ರಷ್ಟು ಜನರು ಸಂಕಷ್ಟ ಎದುರಿಸುವಂತಾಗಿದೆ. ಬಡವರಿಗೆ ಏನೆಲ್ಲಾ ಕಷ್ಟ ಆಗಿದ್ದರು ನೋಟು ನಿಷೇಧದ ಕ್ರಮವನ್ನು ಸ್ವಾಗತಿಸಿರುವುದು ಜನತೆಯ ದೊಡ್ಡ ಗುಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ