Select Your Language

Notifications

webdunia
webdunia
webdunia
webdunia

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ದಾಳಿ..!

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ದಾಳಿ..!
ಮಂಗಳೂರು , ಶುಕ್ರವಾರ, 2 ಜೂನ್ 2023 (13:56 IST)
ಮಂಗಳೂರು : ಬಿಹಾರದಲ್ಲಿ ಪ್ರಧಾನಿ ಮೋದಿ ದಾಳಿಗೆ ಸಂಚು ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ದಾಳಿ ನಡೆಸಿದ್ದಾರೆ.

ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲ ಹಣ ಬಳಕೆ ಆರೋಪದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಸಾಕಷ್ಟು ಮನೆ, ಕಚೇರಿ ಮತ್ತು ಒಂದು ಆಸ್ಪತ್ರೆಯನ್ನು ಪರಿಶೀಲಿಸಿದ್ದಾರೆ.

ದಕ್ಷಿಣ ಭಾರತದ ಪಿಎಫ್ಐ ಹವಾಲ ಹಣದ ಜಾಲವನ್ನು ಎನ್ಐಎ ಭೇದಿಸುತ್ತಿದೆ. ಅಲ್ಲದೇ ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ನೆಟ್ವರ್ಕ್ ಪತ್ತೆಯಾಗಿದೆ. ಈ ಬಗ್ಗೆ ಪತ್ತೆಹಚ್ಚುವ ಸಲುವಾಗಿ ಸ್ಥಳೀಯ ಪೊಲೀಸ್ ಅಧಿಕಾರಿಗಳ ನೆರವು ಪಡೆದು ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ದಾಳಿ ನಡೆಸಲಾಗಿದೆ. 

ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಿನಲ್ಲಿ ಪುಲ್ವಾರಿ ಶರೀಫ್ ಪ್ರಕರಣ ಪತ್ತೆಯಾಗಿತ್ತು. ಈತ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದು, ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಭಾರತ