ರಾಷ್ಟ್ರೀಯ ತನಿಖಾ ದಳ ದಕ್ಷಿಣ ಭಾರತ ಮೂರು ರಾಜ್ಯಗಳಲ್ಲಿ ದಾಳಿ ನಡೆಸಿದೆ. ಕಳೆದ ವರ್ಷದ ಕೊಯಮುತ್ತೂರು ಮತ್ತು ಮಂಗಳೂರು ಬ್ಲಾಸ್ಟ್ ಪ್ರಕರಣಕ್ಕೆ ಸಂಬಧಿಸಿದಂತೆ ತಮಿಳುನಾಡು, ಕೇರಳ ಮತ್ತು ಕರ್ನಾಟಕದ 40 ಪ್ರದೇಶಗಳ ಮೇಲೆ ಏಕಕಾಲಕ್ಕೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೇರಳದ ಪಲ್ಲಕಡನಲ್ಲಿ ದಾಳಿ ನಡೆಸಿದೆ. ದಾಳಿಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್ಗಳು ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನ ಕೊಟ್ಟಯ್ ಈಶ್ವರನ್ ದೇವಸ್ಥಾನದ ಎದುರುಗಡೆ ಸ್ಪೋಟಗೊಂಡ ಕಾರ್ ಬ್ಲಾಸ್ಟ್ನಲ್ಲಿ ಜಮೀಶ್ ಮುಬೀನ್ ಎಂಬಾತ ಸಾವನ್ನಪ್ಪಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಎನ್ಐಎ ಕಳೆದ ವರ್ಷ ಅಕ್ಟೋಬರ್ 23 ರಂದು ತಮಿಳನಾಡಿನ 43 ಸ್ಥಳಗಳಲ್ಲಿ ದಾಳಿ ಮಾಡಿತ್ತು. ಇನ್ನು ಮಂಗಳೂರಿನಲ್ಲಿ ನಡೆದ ಆಟೋ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಆಟೋ ಚಾಲಕ ಮತ್ತು ಆರೋಪಿ ಮೊಹ್ಮದ್ ಶಾರಿಕ್ ಇಬ್ಬರು ಗಾಯಗೊಂಡಿದ್ದರು. ಸ್ಫೋಟ ಪ್ರಕರಣದ ತನಿಖೆಯ ಸಂದರ್ಭದಲ್ಲಿ, ಶಾರಿಕ್ ಮತ್ತು ಆತನ ಸಹಚರರು ಕರ್ನಾಟಕದ ಅರಣ್ಯಗಳಲ್ಲಿ ಇಸ್ಲಾಮಿಕ್ ಸ್ಟೇಟ್ ಕ್ಯಾಂಪ್ ಸ್ಥಾಪಿಸಲು ಬಯಸಿದ್ದ ಎಂದು ಎನ್ಐಎಗೆ ತಿಳಿದುಬಂದಿದೆ. ಅಲ್ಲದೇ ಮಂಗಳೂರು ಸುತ್ತಮುತ್ತಲಿನ ಕಾಡಿನಲ್ಲಿ ಮೊಹ್ಮದ್ ಶಾರಿಕ್ ಮತ್ತು ಆತನ ಸಹಚರರು ಇಸ್ಲಾಮಿಕ್ ಸ್ಟೇಟ್ ಕ್ಯಾಂಪ್ನ್ನು ಹೂಡಿದ್ದು, ಅಲ್ಲಿ ಮೊಹ್ಮದ್ ಶಾರಿಕ್ ತರಬೇತಿ ಪಡೆದಿದ್ದ ಎಂದು ಎನ್ಐಎ ಹೇಳಿದೆ