Webdunia - Bharat's app for daily news and videos

Install App

6 ಕೋಟಿ ಮೌಲ್ಯದ ಡ್ರಗ್ಸ್‌ನೊಂದಿಗೆ ನೈಜಿರೀಯಾ ಪ್ರಜೆ ಅರೆಸ್ಟ್‌

Sampriya
ಸೋಮವಾರ, 7 ಅಕ್ಟೋಬರ್ 2024 (19:46 IST)
ಮಂಗಳೂರು: ನಿಷೇಧಿತ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ನೈಜೀರಿಯಾ ಪ್ರಜೆಯನ್ನು ನಗರದ ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತನಿಂದ ಬರೋಬ್ಬರಿ  ಆರು ಕೋಟಿ ರೂ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ ಪಡೆದಿದ್ದಾರೆ..

ಇದು ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ ಪ್ರಕರಣವಾಗಿದೆ.  ಬೆಂಗಳೂರಿನಲ್ಲಿದ್ದ ನೈಜಿರಿಯಾ ಪ್ರಜೆ ಪೀಟರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಎಂಡಿಎಂಎ ಮಾರಾಟ ವೇಳೆ ಹೈದರ್‌ ಅಲಿ ಎಂಬಾತನನ್ನು ಬಂಧಿಸಲಾಗಿತ್ತು.  ಈತನ ಮಾಹಿತಿ ಆಧಾರಿಸಿ ಇದೀಗ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ  ಪೀಟರ್‌ನನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನ ವಿವೇಕಾನಂದ ನಗರದ ಬಾಡಿಗೆ ಮನೆಯಲ್ಲಿದ್ದ ಪೀಟರ್‌ ಅಕೆಡಿ ಬೆಲನೋವು ಎಂಬಾತನನ್ನು ಪತ್ತೆ ಹಚ್ಚಿ ಆತನ ಮನೆಯಲ್ಲಿ ದಾಸ್ತಾನು ಇರಿಸಿದ್ದ  ಒಟ್ಟು 6 ಕೋಟಿ ಮೌಲ್ಯದ 6.310 ಕೆಜಿ ಎಂಡಿಎಂಎ, 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕ, ಒಟ್ಟು 35 ಎಟಿಎಂ/ಡೆಬಿಟ್ ಕಾರ್ಡ್ ಗಳು, 17 ಇನ್ ಅಕ್ಟಿವ್ ಸಿಮ್ ಕಾರ್ಡ್ ಗಳು, 10 ವಿವಿಧ ಬ್ಯಾಂಕ್ ಗಳ ಬ್ಯಾಂಕ್ ಖಾತೆ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು 6,00,63,500ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ