Webdunia - Bharat's app for daily news and videos

Install App

ಜನರ ಆರೋಗ್ಯದ ದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿ

Webdunia
ಸೋಮವಾರ, 27 ಡಿಸೆಂಬರ್ 2021 (16:15 IST)
ಜನರ ಆರೋಗ್ಯ ದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
 
ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
 
ಕೋವಿಡ್ ನಿಯಂತ್ರಣ ಕ್ರಮವಾಗಿ ಘೋಷಿಸಲಾಗಿರುವ ನೈಟ್ ಕರ್ಫ್ಯೂ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಯಿಸಿ, ಜನರ ಆರೋಗ್ಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
 
ಸಂಪುಟ ವಿಸ್ತರಣೆ ಪಕ್ಷದ ಆಂತರಿಕ ವಿಚಾರವಾಗಿದ್ದು, ಪಕ್ಷದ ಹೈಕಮಾಂಡ್ ಈ ಬಗ್ಗೆ ಗಮನಿಸಲಿದೆ. ಆಡಳಿತ ಮತ್ತು ಪಕ್ಷದ ನಡುವೆ ಸಮನ್ವಯ ಇದೆ. ಬರುವಂತಹ ದಿನಗಳಲ್ಲಿ ಸರ್ಕಾರ ಇನ್ನಷ್ಟು ಒಳ್ಳೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು 2023ಕ್ಕೆ ಬಿಜೆಪಿ ತನ್ನ ಉತ್ತಮ ಕೆಲಸಗಳು ಹಾಗೂ ಸಾಧನೆಗಳನ್ನು ಜನರ ಮುಂದೆ ಇಡಲಿದೆ ಎಂದು ತಿಳಿಸಿದರು
 
ಪಕ್ಷ ಸಂಘಟನೆ ಹಾಗೂ ವಿಷಯಾಧಾರಿತ ಚರ್ಚೆಗಳಿಗೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದೆ. ಎರಡು ತಿಂಗಳಿಗೊಮ್ಮೆ ಈ ಸಭೆಯನ್ನು ಕೈಗೊಂಡು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments